ದಿ.ವಿಷ್ಣುವರ್ಧನ್ ಹಾಗೂ ಬಿ.ಸರೋಜಾ ದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕನ್ನಡ ಚಿತ್ರರಂಗದ ದಿಗ್ಗಜರಾದ ನಟ ಡಾ. ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಬಿ. ಸರೋಜಾದೇವಿ ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ. 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರ ಹೃದಯ
Prize


ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕನ್ನಡ ಚಿತ್ರರಂಗದ ದಿಗ್ಗಜರಾದ ನಟ ಡಾ. ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಬಿ. ಸರೋಜಾದೇವಿ ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ.

200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರ ಹೃದಯ ಗೆದ್ದ ಡಾ. ವಿಷ್ಣುವರ್ಧನ್ ಅವರು ಕನ್ನಡಿಗರ ಪಾಲಿಗೆ “ಸಾಹಸ ಸಿಂಹ” ಎಂದು ಹೆಸರಾಗಿದ್ದರು. 1972ರಲ್ಲಿ ‘ವಂಶವೃಕ್ಷ’ ಹಾಗೂ ‘ನಾಗರಹಾವು’ ಸಿನಿಮಾಗಳ ಮೂಲಕ ಚಿತ್ರರಂಗ ಪ್ರವೇಶ ಮಾಡಿದ ಅವರು ಅನೇಕ ರೀತಿಯ ಪಾತ್ರಗಳಲ್ಲಿ ನಟಿಸಿ ವೈವಿಧ್ಯಮಯ ಅಭಿನಯದಿಂದ ಮೆಚ್ಚುಗೆ ಪಡೆದಿದ್ದರು.

ಅದೇ ರೀತಿ, ಕನ್ನಡ ಸೇರಿದಂತೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿದ ಬಿ. ಸರೋಜಾದೇವಿ ಅವರಿಗೂ ಮರಣೋತ್ತರವಾಗಿ ಈ ಪ್ರಶಸ್ತಿ ನೀಡಲು ಸರ್ಕಾರ ತೀರ್ಮಾನಿಸಿದೆ. ಅವರ ಕುಟುಂಬದವರ ಜೊತೆಗೆ ಅಭಿಮಾನಿಗಳು ಹಾಗೂ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.

ಸಂಪುಟ ಸಭೆಯಲ್ಲಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕ ಮತ್ತು ಸ್ಥಳವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶೀಘ್ರದಲ್ಲೇ ಪ್ರಕಟಿಸಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande