ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 23ರಂದು ನಡೆಯಲಿರುವ ಮಹಿಳಾ ದಸರಾ ಉದ್ಘಾಟನಾ ಸಮಾರಂಭಕ್ಕೆ ಮೈಸೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಆಹ್ವಾನ ನೀಡಿದರು.
ಆಹ್ವಾನ ಸ್ವೀಕರಿಸಿ ಮಾತನಾಡಿದ ಸಚಿವೆ, ಮಹಿಳಾ ಶಕ್ತಿಯ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸೃಜನಾತ್ಮಕ ಪ್ರತಿಭೆಯನ್ನು ಅನಾವರಣಗೊಳಿಸುವ ಈ ವಿಶೇಷ ದಸರಾ ಕಾರ್ಯಕ್ರಮವು ಮೈಸೂರಿನ ವೈಭವಕ್ಕೆ ಮತ್ತೊಂದು ಹೊಳಪು ನೀಡಲಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಸವಿತಾ, ಉಪ ನಿರ್ದೇಶಕರಾದ ಬಸವರಾಜ್ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa