ಇಂಡಿಯಾ ಸ್ಕಿಲ್ಸ್ ಕರ್ನಾಟಕ-2025 ಸ್ಪರ್ಧೆಯಲ್ಲಿ ಭಾಗಿಯಾಗಲು ಅವಕಾಶ
ರಾಯಚೂರು, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಅತಿದೊಡ್ಡ ಜಾಗತಿಕ ವೇದಿಕೆಯಲ್ಲಿ ಕೌಶಲ್ಯ ಪ್ರದರ್ಶಿಸಲು ಸುವರ್ಣಾವಕಾಶ ಒದಗಿಸುತ್ತಿದ್ದು, ಆಸಕ್ತರು ಸೆ.30ರೊಳ
ಇಂಡಿಯಾ ಸ್ಕಿಲ್ಸ್ ಕರ್ನಾಟಕ-2025 ಸ್ಪರ್ಧೆಯಲ್ಲಿ ಭಾಗಿಯಾಗಲು ಅವಕಾಶ


ರಾಯಚೂರು, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಅತಿದೊಡ್ಡ ಜಾಗತಿಕ ವೇದಿಕೆಯಲ್ಲಿ ಕೌಶಲ್ಯ ಪ್ರದರ್ಶಿಸಲು ಸುವರ್ಣಾವಕಾಶ ಒದಗಿಸುತ್ತಿದ್ದು, ಆಸಕ್ತರು ಸೆ.30ರೊಳಗಾಗಿ ಸ್ಪರ್ಧೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಪದಕಗಳನ್ನು ಗೆಲ್ಲುವುದರ ಮೂಲಕ ಭಾರತವನ್ನು ಪ್ರತಿನಿಧಿಸಲು ಅವಕಾಶ ನೀಡುತ್ತಿದೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಇಂಡಿಯಾ ಸ್ಕಿಲ್ಸ್ ಕರ್ನಾಟಕ-2025 (ವಲ್ರ್ಡ್ ಸ್ಕಿಲ್ಸ್) ಸ್ಪರ್ಧೆಯಲ್ಲಿ ಜಗತ್ತಿನಾದ್ಯಂತ 75 ಕ್ಕಿಂತಲೂ ಹೆಚ್ಚು ದೇಶಗಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿವೆ. 16 ರಿಂದ 25 ವರ್ಷದೊಳಗಿನ ಯುವಜನತೆ 63 ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಟತೆಯ ಕಾರ್ಯಕ್ರಮ ಇದಾಗಿದೆ.

2026ನೇ ಸಾಲಿಗೆ ವಿಶ್ವ ಕೌಶಲ್ಯ ಸ್ಪರ್ಧೆಯು ಚೀನಾದ ಶಾಂಘೈನಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯದ ಯುವ ಜನತೆಯ ಜ್ಞಾನಾರ್ಜನೆಗೆ ಸೂಕ್ತ ವೇದಿಕೆ ಕಲ್ಪಿಸಲು ಹಾಗೂ ಮಾದರಿ ಕೌಶಲ್ಯಾಭರಿತ ರಾಜ್ಯವನ್ನಾಗಿಸಲು 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಕೌಶಲ್ಯ ಒಲಂಪಿಕ್ಸ್ (ಇಂಡಿಯಾ ಸ್ಕಿಲ್ಸ್ ಕರ್ನಾಟಕ-2025) ಸ್ಪರ್ಧಾ ಕಾರ್ಯಕ್ರಮವನ್ನು ಜಿಲ್ಲಾ, ವಲಯ ಹಾಗೂ ರಾಜ್ಯ ಮಟ್ಟಗಳಲ್ಲಿ ಕೈಗೊಳ್ಳಲು ಯೋಜಿಸಲಾಗಿದೆ.

ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಲಿಂಕ್: https://www.skillindiadigital.gov.in/home ಮೂಲಕ ಸೆಪ್ಟೆಂಬರ್ 30ರೊಳಗೆ ಸ್ಪರ್ಧೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9606492216ಗೆ ಸಂಪರ್ಕ ಮಾಡಬಹುದಾಗಿದೆ. ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕಚೇರಿ ರಾಯಚೂರು ಜಿಲ್ಲೆ, ಇವರನ್ನು ಕಚೇರಿಯ ವೇಳೆಯಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande