ಮೋಹನ್ ಭಾಗವತ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ
ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಡಾ. ಮೋಹನ್ ಭಾಗವತ್ ಅವರ 75ನೇ ಹುಟ್ಟುಹಬ್ಬದಂದು ಶುಭ ಕೋರಿದ್ದಾರೆ. “ವಸುಧೈವ ಕುಟುಂಬಕಂ ಎಂಬ ಮಂತ್ರದಿಂದ ಪ್ರೇರಿತರಾಗಿ, ಮೋಹನ್ ಭಾಗವತ್ ಅವರು ಸಮಾನತೆ, ಸಾಮರಸ್ಯ ಮತ
Pm


ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಡಾ. ಮೋಹನ್ ಭಾಗವತ್ ಅವರ 75ನೇ ಹುಟ್ಟುಹಬ್ಬದಂದು ಶುಭ ಕೋರಿದ್ದಾರೆ.

“ವಸುಧೈವ ಕುಟುಂಬಕಂ ಎಂಬ ಮಂತ್ರದಿಂದ ಪ್ರೇರಿತರಾಗಿ, ಮೋಹನ್ ಭಾಗವತ್ ಅವರು ಸಮಾನತೆ, ಸಾಮರಸ್ಯ ಮತ್ತು ಸಹೋದರತ್ವವನ್ನು ಬಲಪಡಿಸಲು ಜೀವನವನ್ನು ಸಮರ್ಪಿಸಿದ್ದಾರೆ. ಭಾರತ ಮಾತೆಯ ಸೇವೆಗೆ ಸದಾ ಸಿದ್ಧರಾಗಿರುವ ಅವರ ಸ್ಪೂರ್ತಿದಾಯಕ ವ್ಯಕ್ತಿತ್ವವು ಸಮಾಜಕ್ಕೆ ದಾರಿದೀಪವಾಗಿದೆ. ಅವರಿಗೆ ದೀರ್ಘಾಯುಷ್ಯ ಮತ್ತು ಆರೋಗ್ಯ ಕೋರುತ್ತೇನೆ” ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಬರೆದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande