ಪ್ರಧಾನಿ ಮೋದಿ ಉತ್ತರ ಪ್ರದೇಶ, ಉತ್ತರಾಖಂಡ ಪ್ರವಾಸ
ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ಪ್ರವಾಸ ಕೈಗೊಂಡಿದ್ದಾರೆ. ಅವರು ಮೊದಲಿಗೆ ವಾರಣಾಸಿಗೆ ತೆರಳಿ ಮಾರಿಷಸ್ ಪ್ರಧಾನಿ ಡಾ. ನವೀನ್‌ಚಂದ್ರ ರಾಮಗೂಲಂ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ವಾರಣಾಸಿ ಶೃಂಗಸಭೆ ಕ
Pm


ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ಪ್ರವಾಸ ಕೈಗೊಂಡಿದ್ದಾರೆ.

ಅವರು ಮೊದಲಿಗೆ ವಾರಣಾಸಿಗೆ ತೆರಳಿ ಮಾರಿಷಸ್ ಪ್ರಧಾನಿ ಡಾ. ನವೀನ್‌ಚಂದ್ರ ರಾಮಗೂಲಂ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.

ವಾರಣಾಸಿ ಶೃಂಗಸಭೆ ಕುರಿತು ಪ್ರಧಾನಿ ಕಚೇರಿ ಮಾಹಿತಿ ನೀಡಿದ್ದು, ಭಾರತ–ಮಾರಿಷಸ್ ನಡುವಿನ ಪರಸ್ಪರ ಸಮೃದ್ಧಿ, ಸುಸ್ಥಿರ ಅಭಿವೃದ್ಧಿ ಹಾಗೂ ಸುರಕ್ಷಿತ ಮತ್ತು ಎಲ್ಲರನ್ನೂ ಒಳಗೊಂಡ ಭವಿಷ್ಯದತ್ತ ಸಾಗುವ ಹಂಚಿಕೆಯ ಪ್ರಯಾಣದಲ್ಲಿ ಈ ಶೃಂಗಸಭೆ ಒಂದು ಪ್ರಮುಖ ಮೈಲಿಗಲ್ಲಾಗಲಿದೆ ಎಂದು ತಿಳಿಸಿದೆ.

ಮಾರಿಷಸ್ ಪ್ರಧಾನಿ ರಾಮಗೂಲಂ ಅವರು ಸೆಪ್ಟೆಂಬರ್ 9ರಿಂದ 16ರವರೆಗೆ ಭಾರತ ಭೇಟಿಯಲ್ಲಿದ್ದಾರೆ. ಈ ಅವಧಿಯಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, ಸಹಕಾರದ ಸಂಪೂರ್ಣ ವರ್ಣಪಟಲವನ್ನು ಪರಿಶೀಲಿಸುವ ನಿರೀಕ್ಷೆಯಿದೆ. ಈ ಭೇಟಿ, ಈ ವರ್ಷದ ಮಾರ್ಚ್‌ನಲ್ಲಿ ಮೋದಿ ಅವರ ಮಾರಿಷಸ್ ಪ್ರವಾಸದಿಂದ ಆರಂಭವಾದ ಸಕಾರಾತ್ಮಕ ಆವೇಗವನ್ನು ಇನ್ನಷ್ಟು ಬಲಪಡಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ವಾರಣಾಸಿ ಕಾರ್ಯಕ್ರಮಗಳ ನಂತರ ಪ್ರಧಾನಿ ಮೋದಿ ಡೆಹ್ರಾಡೂನ್‌ಗೆ ತೆರಳಿ, ಉತ್ತರಾಖಂಡದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬಳಿಕ ಅವರು ಸ್ಥಳೀಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande