ಲಿಂಗತ್ವ ಅಲ್ಪ ಸಂಖ್ಯಾತರ ಮತ್ತು ದೇವದಾಸಿ ಮಹಿಳೆಯರ ಮರು ಸಮೀಕ್ಷೆ
ಗದಗ, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಲಿಂಗತ್ವ ಅಲ್ಪಸಂಖ್ಯಾತರ ಟ್ರಾನ್ಸ್ಜಂಡರ್ ಮತ್ತು ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಸೆಪ್ಟೆಂಬರ್ 15 ರಿಂದ 45 ದಿನಗಳ ಕಾಲ ರಾಜ್ಯಾದ್ಯಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾರಂಭವಾಗುತ್ತಿದೆ. ಜಿಲ್ಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿ ಸಿ.ಎನ್.ಶ್
ಪೋಟೋ


ಗದಗ, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಲಿಂಗತ್ವ ಅಲ್ಪಸಂಖ್ಯಾತರ ಟ್ರಾನ್ಸ್ಜಂಡರ್ ಮತ್ತು ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಸೆಪ್ಟೆಂಬರ್ 15 ರಿಂದ 45 ದಿನಗಳ ಕಾಲ ರಾಜ್ಯಾದ್ಯಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾರಂಭವಾಗುತ್ತಿದೆ. ಜಿಲ್ಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಪೊಸ್ಟರ್ ಬಿಡುಗಡೆ ಮಾಡುವದರ ಮೂಲಕ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶ್ರೀಮತಿ.ಪದ್ಮಾವತಿ.ಜಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶ್ರೀಮತಿ.ಅನುಪಮಾ ಅಂಗಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರಾದ ಶ್ರೀಮತಿ ದಾಕ್ಷಾಯಣಿ ಪಾಟೀಲ, ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಶ್ರೀಮತಿ ರಫೀಕಾ ಹಳ್ಳೂರ ಮತ್ತು ಇಲಾಖಾ ಸಿಬ್ಬಂದಿಗಳು ಹಾಗೂ ಸಮುದಾಯ ಆಧಾರಿತ ಸಂಸ್ಥೆಯವರು ಭಾಗವಹಿಸಿದ್ದರು.

ಮಾನ್ಯ ವ್ಯವಸ್ಥಾಪಕ ನಿದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಬೆಂಗಳೂರು ಇವರ ನಿರ್ದೇಶನದಂತೆ ಲಿಂಗತ್ವ ಅಲ್ಪಸಂಖ್ಯಾತರ ( ಟ್ರಾನ್ಸ್ಜೆಂಟರ್) ಮತ್ತು ದೇವದಾಸಿ ಮರು ಸಮೀಕ್ಷೆಯನ್ನು ರಾಜ್ಯಾದ್ಯಂತ ಸೆಪ್ಟೆಂಬರ್ 15 ರಿಂದ 45 ದಿನಗಳ ಕಾಲಾವಕಾಶದಲ್ಲಿ ದೇವದಾಸಿ ಮಹಿಳೆಯರ ಸಮೀಕ್ಷೆಯನ್ನು ತಾಲೂಕಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯನ್ನು ತಾಲೂಕು ಆಸ್ಪತ್ರೆಗಳಲ್ಲಿ ನಡೆಸಲಾಗುತ್ತಿದೆ. ದೇವದಾಸಿ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ನಿಗದಿಪಡಿಸಿದ ಅವಧಿಯೊಳಗಾಗಿ ಮೇಲ್ಕಂಡ ನಿಗದಿಪಡಿಸಿದ ಸ್ಥಳಗಳಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು ಹಾಗೂ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದಾಗಿದೆ

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande