ಸೈಕಲ್ ಜಾಥಾಗೆ ನೋಂದಣಿ ಪ್ರಾರಂಭ
ಗದಗ, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆಪ್ಟೆಂಬರ್ 15ರಂದು ಆಚರಿಸಲಾಗುತ್ತಿದ್ದು, ದಿನಾಚರಣೆಯ ನಿಮಿತ್ತ ಜಿಲ್ಲಾಧಿಕಾರಿಗಳು, ಗದಗ ರವರು ಸೆಪ್ಟೆಂಬರ್ 15ರಂದು ಬೆಳಿಗ್ಗೆ 6.30 ಗಂಟೆಗೆ ಬಸವೇಶ್ವರ ಸರ್ಕಲ್ನಿಂದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗ
ಪೋಟೋ


ಗದಗ, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆಪ್ಟೆಂಬರ್ 15ರಂದು ಆಚರಿಸಲಾಗುತ್ತಿದ್ದು, ದಿನಾಚರಣೆಯ ನಿಮಿತ್ತ ಜಿಲ್ಲಾಧಿಕಾರಿಗಳು, ಗದಗ ರವರು ಸೆಪ್ಟೆಂಬರ್ 15ರಂದು ಬೆಳಿಗ್ಗೆ 6.30 ಗಂಟೆಗೆ ಬಸವೇಶ್ವರ ಸರ್ಕಲ್ನಿಂದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದ ವರೆಗೆ ಸೈಕಲ್ ಜಾಥವನ್ನು ಹಮ್ಮಿಕೊಳ್ಳಲು ಸೂಚಿಸಿರುತ್ತಾರೆ.

ಸೈಕಲ್ ಜಾಥಾದಲ್ಲಿ ಭಾಗವಹಿಸಲು 14 ವರ್ಷ ಮೇಲ್ಪಟ್ಟ ಪುರುಷರು ಮಹಿಳೆಯರು ಸಾರ್ವಜನಿಕರು ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಎಲ್ಲರೂ ಭಾಗವಹಿಸಬಹುದಾಗಿದ್ದು ಸೈಕಲ್ ಜಾಥಾದಲ್ಲಿ ಭಾಗವಹಿಸುವವರು ಸೆಪ್ಟೆಂಬರ್ 13ರ ಸಂಜೆ 5 ಗಂಟೆಯೊಳಗೆ ನೊಂದಾಯಿಸಿಕೊಳ್ಳಬೇಕು. ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಭಾಗವಹಿಸಿ ನನ್ನ ಮತ ನನ್ನ ಹಕ್ಕು ಎಂಬ ಮಹತ್ವದ ಆಶಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಗದಗ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಜಿಲ್ಲಾ ಮಟ್ಟದ ಅಧಿಕಾರಿಗಳು, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ : ಪ್ರಜಾಪ್ರಭುತ್ವ ದಿನಾಚರಣೆಯನ್ನು ಜಿಲ್ಲಾಧಿಕಾರಿಗಳ ಆಡಿಟೋರಿಯಮ್ ಹಾಲ್‌ನಲ್ಲಿ ಬೆಳಿಗ್ಗೆ 10 ಗಂಟೆಗೆ ಆಚರಿಸಲಾಗುತ್ತಿದೆ.

ಕಾರ್ಯಕ್ರಮಕ್ಕೆ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು, ಗದಗ ತಾಲೂಕು ಮಟ್ಟದ ಅಧಿಕಾರಿಗಳು, ಪರಿಶಿಷ್ಟ ವರ್ಗಗಳ ಪರಿಶಿಷ್ಟ ಜಾತಿಗಳ ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತ ವರ್ಗಗಳ ಮುಖಂಡರುಗಳು ಹಾಗೂ ಸರ್ವಸದಸ್ಯರು, ಗಣ್ಯ ವ್ಯಕ್ತಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ದಿನಾಂಕ 15-09-2025ರಂದು ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಕೋರಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande