ಸಮಾಜದ ನೈಜ ಸ್ಥಿತಿ ಅರಿಯಲು ಸಮೀಕ್ಷೆ ಅಗತ್ಯ : ಬಿ.ಕೆ. ರವಿ
ಕೊಪ್ಪಳ, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿದ್ಯಾರ್ಥಿಗಳು ಸಂಶೋಧನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಸಮಾಜಮುಖಿ ಹೊಣೆಗಾರಿಕೆಯನ್ನು ಅರಿಯಲು ಅವಕಾಶ ದೊರೆಯುತ್ತದೆ. ಸಮಾಜದ ನೈಜ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಮೀಕ್ಷೆಗಳು ಅತ್ಯಂತ ಅಗತ್ಯವಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತ
ಸಮಾಜದ ನೈಜ ಸ್ಥಿತಿ ಅರಿಯಲು ಸಮೀಕ್ಷೆ ಅಗತ್ಯ : ಬಿ.ಕೆ. ರವಿ


ಕೊಪ್ಪಳ, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿದ್ಯಾರ್ಥಿಗಳು ಸಂಶೋಧನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಸಮಾಜಮುಖಿ ಹೊಣೆಗಾರಿಕೆಯನ್ನು ಅರಿಯಲು ಅವಕಾಶ ದೊರೆಯುತ್ತದೆ. ಸಮಾಜದ ನೈಜ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಮೀಕ್ಷೆಗಳು ಅತ್ಯಂತ ಅಗತ್ಯವಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಬಿ.ಕೆ. ರವಿ ಅವರು ಹೇಳಿದ್ದಾರೆ.

ಕೊಪ್ಪಳ ವಿಶ್ವವಿದ್ಯಾಲಯ ಮತ್ತು ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಆಶ್ರಯದಲ್ಲಿ ಆಯೋಜಿಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾಗೃತಿ ಅಭಿಯಾನ – 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಸಂಗ್ರಹವಲ್ಲ, ಅವು ಸಮಾಜದ ದಿಕ್ಕು ತೋರಿಸುವ ದಾರಿದೀಪ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಸಮೀಕ್ಷೆ ಮಾರ್ಗದರ್ಶಿಯಾಗುತ್ತದೆ ಎಂದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಮ್ಮ ಎಲ್ಲ ವಿದ್ಯಾರ್ಥಿಗಳು ಮನೆ ಮನೆಗೆ ತಲುಪಿ ಮಾಹಿತಿಯನ್ನು ನೀಡುವಂತೆ ಮನವೊಲಿಸುವ ಕೆಲಸವನ್ನು ಪ್ರತಿನಿಧಿಗಳಾಗಿ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಪೆÇ್ರ. ಬಿ.ಕೆ ರವಿ ಕರೆ ನೀಡಿದರು

ಮುಖ್ಯ ಅತಿಥಿಗಳಾದ ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಅವರು ಮಾತನಾಡಿ ಸಮಾಜ ಮತ್ತು ಶಿಕ್ಷಣ ಪರಸ್ಪರ ಪೂರಕ. ಅಂಕಿಅಂಶಗಳ ಆಧಾರದ ಮೇಲೆ ಗ್ರಾಮೀಣಾಭಿವೃದ್ಧಿಗೆ ವೈಜ್ಞಾನಿಕ ದೃಷ್ಟಿಕೋನ ದೊರೆಯುತ್ತದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ವೈ.ಬಿ. ಅಂಗಡಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಜನರ ಶಿಕ್ಷಣ, ಆರೋಗ್ಯ, ಜೀವನಮಟ್ಟ, ಆರ್ಥಿಕ ಪರಿಸ್ಥಿತಿ, ಸಾಮಾಜಿಕ ಹಿನ್ನಲೆ ಹಾಗೂ ಸರಕಾರಿ ಯೋಜನೆಗಳ ಅನುಷ್ಠಾನವನ್ನು ಸಮೀಕ್ಷೆಗಳ ಮೂಲಕ ಅಧ್ಯಯನ ಮಾಡಿದಾಗ, ಯೋಜನೆಗಳ ಪರಿಣಾಮಕಾರಿತ್ವ ಹೆಚ್ಚಲು ನೆರವಾಗುತ್ತದೆ. ಇಂತಹ ಸಮೀಕ್ಷೆಗಳು ಸಮಾಜದ ಬದಲಾವಣೆಗೆ ದಾರಿ ಮಾಡಿಕೊಡುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande