ವಾಹನ ಕಳ್ಳನ ಬಂಧನ ; ಇಬ್ಬರು ಪರಾರಿ
ಆಂಧ್ರ
ಕಳ್ಳ


ವಿಜಯಪುರ, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಪ್ರದೇಶದ ಚಕ್ರಧಾರ ಸಂಗೇಪು ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 17. 15 ಲಕ್ಷ ಮೌಲ್ಯದ ಕಾರು, ಮೊಬೈಲ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಜೀವ ನೆಮೂಲಾ, ಸುಬ್ಬರಾವ ಟಿ ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಗೋಲಗುಮ್ಮಜ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande