ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ
ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧವಾಗಿರುತ್ತದೆ
ಚಿತ್ರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋಲಾರ ಹಾಗೂ ರವಿ ಕಾಲೇಜು ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಕೋಲಾರ, ೧೨ ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಇತ್ತೀಚಿಗೆ ಆತ್ಮಹತ್ಯೆಗಳು ಹೆಚ್ಚಾಗುತ್ತಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ವರ್ಷ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲಾಗುತ್ತಿದೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ನಟೇಶ.ಆರ್ ಅವರು ತಿಳಿಸಿದರು.

ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋಲಾರ ಹಾಗೂ ರವಿ ಕಾಲೇಜು ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಕಾರ್ಯಕ್ರಮವನ್ನು ರವಿ ಕಾಲೇಜು ಗೌರಿಪೇಟೆ, ಕೋಲಾರ ಹಾಗೂ ಸರ್ಕಾರಿ ಶಾಲೆ ಮುಳಬಾಗಿಲುನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಇತ್ತೀಚಿನ ಸಮೀಕ್ಷೆಯ ಪ್ರಕಾರ ಅತಿ ಹೆಚ್ಚು ಆತ್ಮಹತ್ಯೆಗಳು ೧೫ ರಿಂದ ೨೪ ವರ್ಷ ವಯಸ್ಸಿನ ಮಕ್ಕಳಲ್ಲಿ ಆಗುತ್ತಿವೆ. ಸದರಿ ಆತ್ಮಹತ್ಯೆ ಮಾಡಿಕೊಳ್ಳಲು ಹಲವಾರು ಕಾರಣಗಳು ಇರುತ್ತವೆ. ಆತ್ಮಹತ್ಯೆ ಮಾಡಿಕೊಳ್ಳುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿರುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು ಎಂದು ತಿಳಿಸಿದರು.

ಆತ್ಮಹತ್ಯೆಯಂತಹ ಅಲೋಚನೆಗಳನ್ನು ತಮ್ಮ ಕುಟುಂಬದವರಿಗಾಗಲ್ಲಿ ಸ್ನೇಹಿತರಿಗಾಗಲ್ಲಿ ತಿಳಿಸತಕ್ಕದ್ದು, ಅಲ್ಲದೇ ವೈದ್ಯರ ಬಳಿ ಸೂಕ್ತ ಚಿಕಿತ್ಸೆಯನ್ನು ಪಡೆಯಬಹುದು. ಈ ನಿಟ್ಟಿನಲ್ಲಿ ಆತ್ಮಹತ್ಯೆ ತಡೆಗಟ್ಟುವ ಸಲುವಾಗಿ ಪ್ರತಿ ವರ್ಷ ಆತ್ಮಹತ್ಯೆ ತಡೆ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಯಾವುದೇ ರೀತಿಯ ಬೇಜಾರು, ಆತಂಕ, ಭಯ, ಮಾನಸಿಕ ಒತ್ತಡ ಮತ್ತು ಆತ್ಮಹತ್ಯೆ ಆಲೋಚನೆಗಳು ಕಂಡು ಬಂದರೆ ಉಚಿತ ಮಾನಸಿಕ ಆರೋಗ್ಯ ಸಹಾಯವಾಣಿ ೧೪೪೧೬ ಕರೆ, ಕಾನೂನು ಸಲಹೆಗಳಿ ೧೫೧೦೦ ಗೆ ಉಚಿತ ಕರೆ ಮಾಡಬಹುದು ಎಂದು ತಿಳಿಸಿದರು.

ಸದರಿ ಕಾರ್ಯಕ್ರಮದಲ್ಲಿ ಖಾಯಂ ಜನತಾ ನ್ಯಾಯಾಲಯ ಕೋಲಾರ ಬೆಂಗಳೂರು ಪೀಠದ ಹಿನ್ನಲೆ ಮತ್ತು ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಿದರು ಹಾಗೂ ಕರ ಪತ್ರಗಳನ್ನು ಹಂಚಲಾಯಿತು.

ನಗರದ ರವಿ. ಬಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ್ ರವರು ಶಾಲಾ ಕಾಲೇಜುಗಳಲ್ಲಿ ಆತ್ಮಹತ್ಯೆ ತಡೆ ಬಗ್ಗೆ ಅರಿವನ್ನು ಉಂಟು ಮಾಡುವುದು ಬಹಳ ಅವಶ್ಯ ಎಂದು ತಿಳಿಸಿದರು.

ರವಿ ಕಾಲೇಜಿನ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಾಲ್ಯಾಣಾಧಿಕಾರಿ ಡಾ ಜಿ.ಶ್ರೀನಿವಾಸ್, ವಕೀಲರ ಸಂಘದ ಅಧ್ಯಕ್ಷ ಎಲ್.ಶ್ರೀನಿವಾಸ್, ಆರ್.ಎಲ್.ಜಾಲಪ್ಪ ಮೆಡಿಕಲ್ ಕಾಲೇಜಿನ ವೈದ್ಯಕೀಯ ಅಧೀಕ್ಷಕರಾದ ಡಾ|| ಕೃಷ್ಣಪ್ಪ .ಜೆ., . ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಬಿ.ಎ.ಚ್. ಎಂ.ಬಿ.ಬಿ.ಎಸ್. ಎಂ.ಡಿ ಡಾ|| ರವಿಕುಮಾರ್, ಜಿಲ್ಲಾ ಕಾರ್ಯಕ್ರಮಾನುಷ್ಠಾನಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮುಳಬಾಗಿಲು ಸರ್ಕಾರಿ ಕಾರ್ಯಕ್ರಮದಲ್ಲಿ ತಾಲ್ಲೂಕು ದಂಡಾಧಿಕಾರಿಗಳು ಗೀತಾ.ವಿ, ಕಾರ್ಯಕ್ರಮ ಆಯೋಜಕರು ಗ್ರಾಮ ಭಾರತಿ ಟ್ರಸ್ಟ್ ಅಧ್ಯಕ್ಷ ಎಂ.ಬಿ.ಕೃಷ್ಣಮೂರ್ತಿ ರವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋಲಾರ ಹಾಗೂ ರವಿ ಕಾಲೇಜು ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande