ಕೊಪ್ಪಳ, 12 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಸೆ.15 ರಂದು ಬೆಳಿಗ್ಗೆ 6.30 ಗಂಟೆಗೆ ಸೈಕಲ್ ಜಾಥಾವನ್ನು ಆಯೋಜಿಸಲಾಗಿದೆ.
ಸೈಕಲ್ ಜಾಥಾವು ಜಿಲ್ಲಾ ಕ್ರೀಡಾಂಗಣದಿಂದ ಅಶೋಕ ಸರ್ಕಲ್, ಗಂಜ್ ಸರ್ಕಲ್ ಮಾರ್ಗವಾಗಿ ಜಿಲ್ಲಾಡಳಿತ ಭವನದವರೆಗೆ ನಡೆಯಲಿದೆ. ಜಾಥಾದಲ್ಲಿ 14 ವರ್ಷ ಮೇಲ್ಪಟ್ಟ ಪುರುಷ, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ಸಾರ್ವಜನಿಕರು, ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿ, ನೌಕರರು ಸೇರಿದಂತೆ ಎಲ್ಲರೂ ಭಾಗವಹಿಸಬಹುದು. ಲಿಂಕ್ ಮೂಲಕ ಸೆಪ್ಟೆಂಬರ್ 13 ರ ಸಂಜೆ 5 ಗಂಟೆಯೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಭಾಗವಹಿಸಿ, ನನ್ನ ಮತ ನನ್ನ ಹಕ್ಕು ಎಂಬ ಮಹತ್ವದ ಆಶಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್