ರಾಜ್ಯದಲ್ಲಿ ದ್ವಿಭಾಷಾ ತ್ರಿಭಾಷಾ ಸೂತ್ರದ ಚರ್ಚೆ : ಮುಖ್ಯಮಂತ್ರಿ ನಿರ್ಣಯ ಅಂತಿಮ- ಮಧು ಬಂಗಾರಪ್ಪ
ಗದಗ, 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ದ್ವಿಭಾಷಾ ಅಥವಾ ತ್ರಿಭಾಷಾ ಸೂತ್ರದ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ, ರಾಜ್ಯ ಸರ್ಕಾರ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ಸಂಬಂಧ ಮುಖ್ಯಮಂತ್ರಿ ನಿರ್ಧಾರವೇ ಅಂತಿಮವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿ
ಪೋಟೋ


ಗದಗ, 12 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ದ್ವಿಭಾಷಾ ಅಥವಾ ತ್ರಿಭಾಷಾ ಸೂತ್ರದ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ, ರಾಜ್ಯ ಸರ್ಕಾರ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ಸಂಬಂಧ ಮುಖ್ಯಮಂತ್ರಿ ನಿರ್ಧಾರವೇ ಅಂತಿಮವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ಗದಗ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಎನ್ ಸಿ ಪಿ ಕರ್ನಾಟಕ ಸರ್ಕಾರ ಅಂಗೀಕರಿಸುವುದಿಲ್ಲ. ಬದಲಾಗಿ, ಪ್ರತ್ಯೇಕ ರಾಜ್ಯ ಶಿಕ್ಷಣ ನೀತಿ ಎಸ್ ಇ ಪಿ ಯನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ. ಎಸ್ ಇ ಪಿ ಸಮಿತಿಯು ದ್ವಿಭಾಷಾ ಹಾಗೂ ತ್ರಿಭಾಷಾ ಸೂತ್ರಗಳ ಬಗ್ಗೆ ಚರ್ಚೆ ನಡೆಸಿ ವರದಿ ನೀಡಲಿದೆ. ಆ ಬಳಿಕ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಷಯವನ್ನು ಉಲ್ಲೇಖಿಸಿದ ಅವರು, “ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆಯಲ್ಲಿದೆ. ವಿಶೇಷವಾಗಿ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಪತಿ ಅಥವಾ ತಂದೆಯ ಆದಾಯ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸಬೇಕಾ ಎಂಬ ಪ್ರಶ್ನೆ ನ್ಯಾಯಾಲಯದಲ್ಲಿ ಬಾಕಿಯಿದೆ. ಸುಪ್ರೀಂ ಕೋರ್ಟ್ ಯಾವ ಆದೇಶ ನೀಡುತ್ತದೆಯೋ ಅದನ್ನು ಶಿಕ್ಷಣ ಇಲಾಖೆ ಕಟ್ಟುನಿಟ್ಟಾಗಿ ಪಾಲಿಸಲಿದೆ” ಎಂದರು.

ಭವಿಷ್ಯದಲ್ಲಿ ಇಂತಹ ಗೊಂದಲಗಳು ಮರುಕಳಿಸಬಾರದು ಎಂಬ ಕಾರಣಕ್ಕೆ, ಹೊಸ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮುನ್ನ ಕಾನೂನು ಇಲಾಖೆಯ ಅಭಿಪ್ರಾಯವನ್ನು ಪಡೆಯಲಾಗುತ್ತಿದೆ. ಕಾನೂನು ಇಲಾಖೆ ಸ್ಪಷ್ಟನೆ ನೀಡಿದ ನಂತರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ದ್ವಿಭಾಷಾ–ತ್ರಿಭಾಷಾ ಸೂತ್ರದ ಚರ್ಚೆಯ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲಿ ಪ್ರಸ್ತುತ ನಡೆಯುತ್ತಿರುವ ನೇಮಕಾತಿ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ತೋರಿಸಿದೆ. ಶಿಕ್ಷಣ ಸಚಿವರ ಹೇಳಿಕೆ ರಾಜ್ಯದ ವಿದ್ಯಾರ್ಥಿ-ಶಿಕ್ಷಕರ ವಲಯದಲ್ಲಿ ಕುತೂಹಲ ಮೂಡಿಸಿದೆ

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande