ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟವನ್ನು ಸೆ.15 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣ ಮೈದಾನದಲ್ಲಿ ಆಯೋಜಿಸಲಾಗಿದೆ.
ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಯ ಹಾಕಿ, ಬಾಕ್ಸಿಂಗ್ ಮತ್ತು ಕಬ್ಬಡ್ಡಿ ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಜಿಲ್ಲಾ ಕ್ರೀಡಾಂಗಣದಲ್ಲಿ ನೋಂದಾಯಿಸಿಕೊಂಡು ಗುರುತಿನ ಚೀಟಿಯೊಂದಿಗೆ ಹಾಜರಾಗಬೇಕು.
ಸೂಚನೆ : ಪ್ರಸ್ತಕ ಸಾಲಿನಿಂದ ದಸರಾ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ತಾಲ್ಲೂಕು, ಜಿಲ್ಲೆ ಮತ್ತು ವಿಭಾಗ ಮಟ್ಟದವರಿಗೆ ಮೊಬೈಲ್ ಆಪ್, ವೆಬ್ ಪೋರ್ಟ್‍ಲ್ ನಲ್ಲಿ ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ. ದಸರಾ ಕ್ರೀಡಾ ಕೂಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳಿಗೆ ಮಾತ್ರ ಅರ್ಹರಿರುತ್ತಾರೆ.
ಕ್ರೀಡಾ ಕೂಟದಲ್ಲಿ ರಕ್ಷಣಾ ಪಡೆ, ಅರೆ ರಕ್ಷಣಾ ಪಡೆ, ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರರಲ್ಲ. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಮತ್ತು ಪ್ರಯಾಣ ಭತ್ಯೆಯನ್ನು ಸರ್ಕಾರಿ ಬಸ್ ದರಗಳನ್ವಯ ಕೆ2 ಮೂಲಕ ಕ್ರೀಡಾಪಟುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಎಂ.ಜಾಕೀರ್-9036335986, ಮಹ್ಮದ್ ಮಸೂದ್-9886688858 ಮತ್ತು ಕಚೇರಿ ಸಿಬ್ಬಂದಿ ರತಿಕಾಂತ್-8971238689 ಗೆ ಸಂಪರ್ಕಿಸಬಹುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್