ಲಕ್ನೋ ರಸ್ತೆ ಅಪಘಾತದಲ್ಲಿ ಐದು ಸಾವು, 19 ಮಂದಿ ಗಾಯ
ಲಕ್ನೋ, 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಕಾಕೋರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದು, 19 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಕೈಸರ್‌ಬಾಗ್ ಡಿಪೋದ ಬಸ್ ಹರ್ದೋಯ್‌ನಿಂದ ಪ್ರಯಾಣಿ
Accident


ಲಕ್ನೋ, 12 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಕಾಕೋರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದು, 19 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಕೈಸರ್‌ಬಾಗ್ ಡಿಪೋದ ಬಸ್ ಹರ್ದೋಯ್‌ನಿಂದ ಪ್ರಯಾಣಿಕರನ್ನು ಹೊತ್ತುಕೊಂಡು ಲಕ್ನೋಗೆ ಬರುತ್ತಿದ್ದ ವೇಳೆ, ಟಿಕೈಟ್‌ಗಂಜ್ ಬಳಿ ಪಾದಚಾರಿಯನ್ನು ತಪ್ಪಿಸಲು ಪ್ರಯತ್ನಿಸುವಾಗ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ನಂತರ ಕಾಕೋರಿ ಪೊಲೀಸರು ತಕ್ಷಣ ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದರು. ಮೃತರನ್ನು ಪಿಲಿಭಿತ್ ಜಿಲ್ಲೆಯ ಬಾಬುರಾಮ್, ಮಥುರಾದ ನಾರ್ದೇವ್, ಬದೌನ್‌ನ ಸಂಜೀವ್, ಲಕ್ನೋದ ಕಾಕೋರಿಯ ದಿಲ್ಶಾದ್ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಮೃತನನ್ನು ಗುರುತಿಸಲಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande