ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ : ಸೆ.15ರಂದು ಸೈಕಲ್ ಜಾಥಾ
ರಾಯಚೂರು, 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮತ್ತ, ನನ್ನ ಮತ ನನ್ನ ಹಕ್ಕು ಎಂಬ ಧ್ಯೇಯವಾಕ್ಯದೊಂದಿಗೆ ಸೆ.15ರಂದು ಸೈಕಲ್ ಜಾಥಾ ಆಯೋಜಿಸಲಾಗಿದೆ. ನಗರದ ಯುವಸಮೂಹವು ಸೈ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ : ಸೆ.15ರಂದು ಸೈಕಲ್ ಜಾಥಾ


ರಾಯಚೂರು, 12 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮತ್ತ, ನನ್ನ ಮತ ನನ್ನ ಹಕ್ಕು ಎಂಬ ಧ್ಯೇಯವಾಕ್ಯದೊಂದಿಗೆ ಸೆ.15ರಂದು ಸೈಕಲ್ ಜಾಥಾ ಆಯೋಜಿಸಲಾಗಿದೆ.

ನಗರದ ಯುವಸಮೂಹವು ಸೈಕಲ್ ಜಾಥಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.

ಅಂದು ಬೆಳಗ್ಗೆ 6:30 ಗಂಟೆಗೆ ನಗರದ ಮಹಾತ್ಮಗಾಂಧೀ ಮೈದಾನದಿಂದ ಸೈಕಲ್ ಜಾಥಾ ನಡೆಯಲಿದೆ. ಜಾಥಾದಲ್ಲಿ 14 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ಸಾರ್ವಜನಿಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಅಧಿಕಾರಿಗಳು, ಸಂಘ ಸಂಸ್ಥೆಯ ಮುಖಂಡರು ಸೇರಿದಂತೆ ಇನ್ನಿತರರು ಭಾಗವಹಿಸಲು ಸೆ.14ರ ಸಂಜೆ 5ಗಂಟೆಯೊಳಗೆ ಹೆಸರನ್ನು https://docs.google.com/forms/d/e/1FAIpQLSenhrptGtVtdQU9vn6cu7qAlbBFdQ-ZW1cH5clBrCmYVtUQCw/viewform?usp=header ಲಿಂಕ್ ಮೂಲಕ ನೋಂದಾಯಿಸಿಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande