ವಿಜಯಪುರ, 12 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ ೧೫ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ೧೮ನೇ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಹಾಗೂ ನವದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ಹುನಗುಂದ ಶಾಸಕ ಹಾಗೂ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ರಾಜ್ಯಸಭಾ ಸದಸ್ಯರು, ವಿಧಾನ ಪರಿಷತ್ ಶಾಸಕರು, ವಿಧಾನಸಭೆ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ.
ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಂಪತ್ ಲಮಾಣಿ ಅತಿಥಿ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಹೂ ಮಾಲಾರ್ಪಣೆ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ನಾಗರಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯ ಭಾಂದವರು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಳ್ಳುವಂತೆ ಸಮಾಹ ಕಲ್ಯಾಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ರಮೇಶ ಚವ್ಹಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande