ಕಾರ್ಕಳ ಕಾಂಗ್ರೆಸ್ ಕಚೇರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ
ಕಾರ್ಕಳ, 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಆಸ್ತಿ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್
Visit


ಕಾರ್ಕಳ, 12 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಆಸ್ತಿ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.

ಕಾರ್ಕಳದ ಕಾಂಗ್ರೆಸ್ ಕಚೇರಿಯಲ್ಲಿ ‌ಶುಕ್ರವಾರ ಮಾತನಾಡಿದ ಸಚಿವರು, ಕಳೆದ ಬಾರಿಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉದಯ್ ಶೆಟ್ಟಿ ಅವರಿಗೆ ಗೆಲ್ಲಲು ಉತ್ತಮ ಅವಕಾಶಗಳಿದ್ದವು. ಆದರೆ, ಅದೃಷ್ಟ ಕೈಹಿಡಿಯಲಿಲ್ಲ. ಮುಂದಿನ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ವಾತಾವರಣವಿದೆ ಎಂದರು.

ನಾನು ಎರಡೂ ಬಾರಿ‌ ಸೋತರೂ ಜನರ ನಡುವೆ ಉತ್ತಮ ಒಡನಾಟ ಬೆಳೆಸಿಕೊಂಡ ಫಲವಾಗಿ ಸತತ ಎರಡು ಭಾರಿ ಅಂತರದಿಂದ ಜನರು ಗೆಲ್ಲಿಸಿದರು. ಸೋಲೇ ಗೆಲುವಿನ ಮೆಟ್ಟಿಲು, ಉದಯ್ ಶೆಟ್ಟಿ ಅವರು ಜನರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಮುಂದಿನ ಬಾರಿ ಅವರ ಗೆಲುವು ಶತಸಿದ್ಧ ಎಂದು ಸಚಿವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande