ರಾಯಚೂರು, 12 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು.ನಿಸಾರ್ ಅಹಮದ್ ಅವರು ರಾಯಚೂರ ಜಿಲ್ಲಾ ಪ್ರವಾಸದ ವೇಳೆಯಲ್ಲಿ ನಗರದ ರೈಲ್ವೆ ನಿಲ್ದಾಣದ ಪಕ್ಕದಲ್ಲಿರುವ ಮೆಥೋಡಿಸ್ಟ್ ಚರ್ಚಗೆ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಮಾಡಿದರು.
ಈ ವೇಳೆ ಮಾತನಾಡಿದ ಅವರು 50 ಲಕ್ಷ ರೂ.ಗಳ ಅನುದಾನದಲ್ಲಿ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಹಾಗೂ ಗುಣಮಟ್ಟದಿಂದ ಪೂರ್ಣಗೊಳಿಸಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ರಾಯಚೂರು ತಾಲೂಕಿನ, ಉಡಮಗಾಲ ಖಾನಾಪೂರ ಗ್ರಾಮದ ಯೆಹೋವನ ಯುವಕ ಮಂಡಳಿ ಚರ್ಚ್ ದುರಸ್ತಿ ಮತ್ತು ನವೀಕರಣಕ್ಕಾಗಿ ಸಹಾಯಾನುದಾನ ಮಂಜೂರು ಮಾಡಬೇಕು. ಹಾಗೂ ತಾಲೂಕಿನ ತುಂಗಭದ್ರ ಕ್ಯಾಂಪ್ ಮೆಥೋಡಿಸ್ಟ್ ಚರ್ಚ್ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಮಾಡುವಂತೆ ಈ ವೇಳೆ ಕ್ರೈಸ್ತ ಧರ್ಮದ ಮುಖಂಡರು ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್