ನವದೆಹಲಿ,12 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹೊಸದಾಗಿ ಆಯ್ಕೆಯಾದ ದೇಶದ 15ನೇ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಧಾಕೃಷ್ಣನ್ ಅವರು ಪ್ರತಿ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದರು. ಜುಲೈ 21 ರಂದು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಹಠಾತ್ ರಾಜೀನಾಮೆ ನೀಡಿದ ಬಳಿಕ ಈ ಚುನಾವಣೆ ನಡೆದಿತ್ತು.
ಉಪ ರಾಷ್ಟ್ರಪತಿಗಳ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ, ಕರ್ನಾಟಕ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್, ಕೇಂದ್ರ ಸಚಿವರು ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa