ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಹಲಕುಂದಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿದಂದ ಉಪಕೇಂದ್ರದಿಂದ ವಿದ್ಯುತ್ ಸರಬರಾಜಾಗುವ 11ಕೆ.ವಿ ಮಾರ್ಗಗಳಲ್ಲಿ ಸೆ.14 ರಂದು ಬೆಳಿಗ್ಗೆ 09 ರಿಂದ ಸಂಜೆ 05 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಸಹಾಯಕ ಇಂಜಿನಿಯರ್ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು
ಎಫ್-1 ಫೀಡರ್‍ನ ಗ್ಯಾಲಕ್ಷಿ ಕೆಮಿಕಲ್ ಮಾರ್ಗದ 2, 3ನೇ ಹಂತ ಮುಂಡರಿಗಿ ಕೈಗಾರಿಕಾ ಪ್ರದೇಶ, ಎಫ್-10 ಮಿಂಚೇರಿ ಐಪಿ ಮಾರ್ಗದ ಮುಂಡರಿಗಿ, ಹಲಕುಂದಿ, ಮಿಂಚೇರಿ, ಎಸ್.ಜೆ ಕೋಟೆ ಕೃಷಿ ಪ್ರದೇಶಗಳು.
ಎಫ್-11 ಯಶಸ್ವಿನಿ ಸ್ಪಾಂಜ್ ಕೈಗಾರಿಕೆ ಪ್ರದೇಶ ಮಾರ್ಗದ ಹಲಕುಂದಿ ಗ್ರಾಮ, ಮುಂಡರಿಗಿ ಕೈಗಾರಿಕಾ ಪ್ರದೇಶ. ಎಫ್-2 ಸುಧಾಕರ ಪೈಪ್ ಮಾರ್ಗ, ಎಫ್-4 ಗುರುನಾಥ ರೈಸ್ ಮಿಲ್ ಮಾರ್ಗ, ಎಫ್-5 ಅಪೇರಲ್ ಪಾರ್ಕ್ ಮಾರ್ಗ ಮತ್ತು ಎಫ್-6 ಸ್ನೇಹ ಗ್ಲಾಸ್ ಮಾರ್ಗಗಳ 2, 3 ಮತ್ತು 4ನೇ ಹಂತ ಮುಂಡರಿಗಿ ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್