ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ : ಯು.ನಿಸಾರ್ ಅಹಮದ್
ರಾಯಚೂರು, 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಲ್ಪಸಂಖ್ಯಾತರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು.ನಿಸಾರ್ ಅಹಮದ್ ಅವರು ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರೈಸ್ತ,
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಯು.ನಿಸಾರ್ ಅಹಮದ್


ರಾಯಚೂರು, 12 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಲ್ಪಸಂಖ್ಯಾತರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು.ನಿಸಾರ್ ಅಹಮದ್ ಅವರು ಹೇಳಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರೈಸ್ತ, ಜೈನ್, ಬೌದ್ಧರು, ಸಿಖ್ ಮತ್ತು ಪಾರ್ಸಿ ಸಮುದಾಯದ ಮುಖಂಡರೊಂದಿಗೆ ಸಮಾಲೋಚನೆ ಮತ್ತು ಕುಂದುಕೊರತೆ ಅರ್ಜಿ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿನ ಅಲ್ಪಸಂಖ್ಯಾತರ ಮುಸ್ಲಿ ಸಮುದಾಯವರ ಬಹಳಷ್ಟು ಮಕ್ಕಳು ಶಾಲೆಯಿಂದ ಹೊರಗಿದ್ದಾರೆ. ಈ ಬಗ್ಗೆ ಮುಸ್ಲಿಂ ಸಮುದಾಯದ ಮುಖಂಡರು ಯೋಚಿಸಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ವಿದ್ಯಾವಂತರನ್ನಾಗಿ ಮಾಡಲು ಶ್ರಮಿಸಬೇಕು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಅನೇಕ ಶಾಲಾ ಕಾಲೇಜು ಪ್ರಾರಂಭಿಲಾಗಿದ್ದು, ಅವುಗಳ ಸದುಪಯೋಗವಾಗಬೇಕು ಎಂದರು.

ರಾಜ್ಯದಲ್ಲಿ ಶೇ.44 ರಷ್ಟು ಅಲ್ಪಸಂಖ್ಯಾತರ ಮಕ್ಕಳು ಅಕ್ಷರದ ಜ್ಞಾನವಿಲ್ಲದವರು ಇದ್ದಾರೆ. ದೇಶದಲ್ಲಿ ಅಲ್ಪಸಂಖ್ಯಾತರಲ್ಲಿ ಜೈನ್, ಕ್ರಿಶ್ಚಿಯನ್ ಮತ್ತು ಕಡಿಮೆ ಜನಸಂಖ್ಯೆ ಇರುವ ಪಾರ್ಸಿ ಸಮುದಾಯದವರು ಹೆಚ್ಚು ಸುಶಿಕ್ಷಿತರಾಗಿದ್ದಾರೆ. ಮುಸ್ಲಿಂ ಸಮುದಾಯದ ಶೇ.50 ರಷ್ಟು ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಶೇ.10 ರಷ್ಟು ಮಾತ್ರ ಎಸ್‍ಎಸ್‍ಎಲ್‍ಸಿ ಓದುತ್ತಿದ್ದಾರೆ. ಶೇಕಡಾ 2.7 ಮಾತ್ರ ಪದವೀಧರರಿದ್ದಾರೆ. ಐಎಎಸ್, ಐಪಿಎಸ್ ಮಾಡುವವರ ಸಂಖ್ಯೆಯಂತೂ ತೀರಾ ಕಮ್ಮಿ ಇದೆ.

ಮುಸ್ಲಿಮರು ತಮ್ಮ ತಮ್ಮ ಬಡಾವಣೆಗಳಲ್ಲಿ ಶಿಕ್ಷಣದಿಂದ ವಂಚಿತರಾದವರನ್ನು ಸಮೀಕ್ಷೆ ನಡೆಸಿ ಅವರಿಗೆ ಶಿಕ್ಷಣ ಕೊಡಲು ಮುಂದಾಗಬೇಕು ಎಂದು ಸಲಹೆ ಮಾಡಿದರು.

ಪ್ರತಿಯೊಂದು ಮಗುವೂ ಕಡ್ಡಾಯ ಶಿಕ್ಷಣ ಪಡೆಯಬೇಕು ಶಿಕ್ಷಣಕ್ಕಾಗಿ ಸರ್ಕಾರಗಳು ಕೋಟ್ಯಾಂತರ ರೂ. ಅನುದಾನ ನೀಡುತ್ತವೆ. ಇದು ಸದ್ಬಳಕೆ ಆಗಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗಬಾರದು. ಬಡ ಮಕ್ಕಳಿದ್ದರೆ ಅವರಿಗೆ ಸರ್ಕಾರಿ ಶಾಲೆಗೆ ಸೇರಿಸಬೇಕು. ಈಗ ಅಂಗನವಾಡಿಯಿಂದ ಉನ್ನತ ಶಿಕ್ಷಣದವರೆಗೆ ಉಚಿತ ಶಿಕ್ಷಣ ಸಿಗುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಶೈಕ್ಷಣಿಕ ಸೌಲಭ್ಯಗಳನ್ನು ಅಲ್ಪಸಂಖ್ಯಾತರು ಹೆಚ್ಚು ಬಳಸಿಕೊಳ್ಳುತ್ತಿಲ್ಲ ಎನ್ನುವುದು ಕಳವಳಕಾರಿ ಸಂಗತಿ ಎಂದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande