ಗ್ಯಾಂಗ್ಟಾಕ್, 12 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸಿಕ್ಕಿಂನ ಗೇಜಿಂಗ್ ಜಿಲ್ಲೆಯ ಯಾಂಗ್ಥಾಂಗ್ ಕ್ಷೇತ್ರದ ಅಪ್ಪರ್ ರಿಂಬಿ ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಭಾರಿ ಮಳೆ ಪರಿಣಾಮವಾಗಿ ತಡರಾತ್ರಿ ಭೂಕುಸಿತ ಉಂಟಾಗಿ, ಒಂದು ಮನೆ ಸಂಪೂರ್ಣವಾಗಿ ನೆಲಸಮವಾಗಿದೆ. ಮನೆಯೊಳಗೆ ಮಲಗಿದ್ದವರು ಅವಶೇಷಗಳಲ್ಲಿ ಸಿಲುಕಿಕೊಂಡಿದ್ದರು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ತಂಡ, ಪೊಲೀಸರು, ಎಸ್‌ಎಸ್‌ಬಿ ಜವಾನರು ಹಾಗೂ ಸ್ಥಳೀಯರು ಸೇರಿ ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಇಬ್ಬರನ್ನು ಜೀವಂತವಾಗಿ ಹೊರತೆಗೆಯಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಗೇಜಿಂಗ್ ಎಸ್‌ಪಿ ಚೆರಿಂಗ್ ಶೆರ್ಪಾ ತಿಳಿಸಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa