ವಿಜಯಪುರ, 12 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ನಗರದಲ್ಲಿ ಆಟೋ ಚಾಲಕರ ದಾಖಲೆಗಳನ್ನು ಸಂಚಾರಿ ಪೊಲೀಸರು ತಪಾಸಣೆ ಮಾಡಿದರು. ಚಾಲನಾ ಪರವಾನಗಿ, ರೆಜಿಸ್ಟ್ರೇಶನ್ ಸರ್ಟಿಫಿಕೇಟ್, ಇನ್ಶೂರೆನ್ಸ್, ಮುಂತಾದ ದಾಖಲೆಗಳನ್ನು ಪರಿಶೀಲಿಸಿ, ಅವುಗಳನ್ನು ಕಾಲಮಿತಿಯೊಳಗೆ ನವೀಕರಿಸಿಕೊಳ್ಳುವಂತೆ ಜಾಗೃತಿ ಮೂಡಿಸಿದರು. ಮುಂದಿನ ಹಂತದಲ್ಲಿ ಸಮರ್ಪಕ ದಾಖಲೆಗಳಿಲ್ಲದ ವಾಹನಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande