ಹಿರಿಯ ನಾಗರಿಕರಿಗೆ ಸೆ.20ರಂದು ನಾನಾ ಸ್ಪರ್ಧೆಗಳ ಆಯೋಜನೆ
ರಾಯಚೂರು , 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025ರ ಅಂಗವಾಗಿ ಕ್ರೀಡಾ/ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆ.20ರಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜ
ಹಿರಿಯ ನಾಗರಿಕರಿಗೆ ಸೆ.20ರಂದು ನಾನಾ ಸ್ಪರ್ಧೆಗಳ ಆಯೋಜನೆ


ರಾಯಚೂರು , 12 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025ರ ಅಂಗವಾಗಿ ಕ್ರೀಡಾ/ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆ.20ರಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.

ಸೆ.20ರಂದು 60ರಿಂದ 70ವರ್ಷದ ಮಹಿಳೆಯರು/ಪುರುಷರಿಗಾಗಿ ಮ್ಯೂಸಿಕಲ್ ಚೇರ್, 60 ರಿಂದ 69 ವರ್ಷ ಹಾಗೂ 70 ವರ್ಷ ಹಾಗೂ ಮೇಲ್ಪಟ್ಟವರಿಗಾಗಿ ಬಿರುಸಿನ ನಡಿಗೆ ಹಾಗೂ ಬಕೆಟ್‍ನಲ್ಲಿ ಬಾಲ್ ಎಸೆಯುವ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

60 ರಿಂದ 70 ವರ್ಷದ ಮಹಿಳೆಯರು/ ಪುರುಷರಿಗಾಗಿ ಗಾಯನ ಸ್ಪರ್ಧೆ, 60 ರಿಂದ 69 ವರ್ಷ ಹಾಗೂ 70 ವರ್ಷ ಹಾಗೂ ಮೇಲ್ಪಟ್ಟವರಿಗಾಗಿ ಏಕ ಪಾತ್ರಾಭಿನಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ವ್ಯಾಪ್ತಿಯ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳ್ಳಿಸಬೇಕೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande