ವಿಶ್ವ ಕೌಶಲ್ಯ ಸ್ಪರ್ಧೆ 2026
ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಜಾಗತಿಕ ಮಟ್ಟದಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಲು 2026 ರಲ್ಲಿ ಚೀನಾದ ಶಾಂಘೈನಲ್
ವಿಶ್ವ ಕೌಶಲ್ಯ ಸ್ಪರ್ಧೆ 2026


ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಜಾಗತಿಕ ಮಟ್ಟದಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಲು 2026 ರಲ್ಲಿ ಚೀನಾದ ಶಾಂಘೈನಲ್ಲಿ ವಿಶ್ವ ಕೌಶಲ್ಯ ಸ್ಪರ್ಧೆ ಏರ್ಪಡಿಸಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ಜಗತ್ತಿನಾದ್ಯಂತ 75 ಕ್ಕಿಂತಲೂ ಹೆಚ್ಚು ರಾಷ್ಟ್ರಗಳು ಭಾಗವಹಿಸುತ್ತಿದ್ದು 16 ರಿಂದ 25 ವರ್ಷದೊಳಗಿನ ಯುವಜನತೆ 63 ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಇದಾಗಿದೆ ಎಂದರು .

ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಆನ್‍ಲೈನ್ ವೆಬ್‍ಸೈಟ್ https://www.skillindiadigital.gov.in/home ಗೆ ಭೇಟಿ ನೀಡಿ ಸೆಪ್ಟೆಂಬರ್ 30 ರೊಳಗೆ ಸ್ಪರ್ಧೆಗೆ ಹೆಸರು ನೋಂದಾಯಿಸಿಕೊಳ್ಳಬಹುದು.

ಅಭ್ಯರ್ಥಿಗಳು 63 ಕೌಶಲ್ಯಗಳಲ್ಲಿ ಕ್ರಮ ಸಂಖ್ಯೆ 01 ರಿಂದ 50 ಕೌಶಲ್ಯಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು 01.01.2004 ರಂದು ಅಥವಾ ನಂತರದಲ್ಲಿ ಜನಿಸಿದವರಾಗಿರಬೇಕು. ಕ್ರಮ ಸಂಖ್ಯೆ 51 ರಿಂದ 63 ಕೌಶಲ್ಯಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು 01.01.2001 ರಂದು ಅಥವಾ ನಂತರದಲ್ಲಿ ಜನಿಸಿದವರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದ ನೆಲಮಹಡಿ ಸಿ ಬ್ಲಾಕ್‍ನ ಕಚೇರಿ ಸಂಖ್ಯೆ 17 ರ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಅಥವಾ ಮೊ.9606492216, 7204237323 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande