ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಕೇಳುವ ವಿಚಾರದಲ್ಲಿ ರಾಜ್ಯದ ಬಿಜೆಪಿ ಸಂಸದರು ಮೌನ ವಹಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ನಾನು ಪ್ರಧಾನಿ, ಹಣಕಾಸು ಸಚಿವರು, ಮತ್ತು ಜಲಶಕ್ತಿ ಸಚಿವರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ. ಭದ್ರಾ ಅಣೆಕಟ್ಟು ಐದು ಜಿಲ್ಲೆಗಳಿಗೆ ಜೀವನಾಡಿಯಾಗಿದ್ದು, ರೈತರ ಜೀವನ ಹಸನು ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಏಕೆಂದರೆ ಸಂಬಳವಿಲ್ಲದೆ, ನಿವೃತ್ತಿ ಹೊಂದದೆ, ಪಿಂಚಣಿ ಪಡೆಯದೇ ಸದಾ ದುಡಿಯುವ ಕಾಯಕಯೋಗಿ ರೈತ. ಕಾಂಗ್ರೆಸ್ ಸರ್ಕಾರದ ಮೇಲೆ ಜನರಿಗೆ ನಂಬಿಕೆಯಿದೆ. ಈ ನಂಬಿಕೆಯನ್ನು ನಾವು ಉಳಿಸಿಕೊಂಡಿದ್ದೇವೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa