ವಿಜಯಪುರ, 13 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸಿಂದಗಿಯಲ್ಲಿ 84 ಕುಟುಂಬಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಸಿಂದಗಿ ಪಟ್ಟಣದ ಸರ್ವೇ ನಂಬರ 842/1ಅ ನಲ್ಲಿ ವಾಸಿಸುತ್ತಿದ್ದ 84 ಕುಟುಂಬಕ್ಕೆ ಸಿಂದಗಿ ಕಾಂಗ್ರೆಸ್ ಶಾಸಕ ಅಶೋಕ ಮನಗೂಳಿ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಹಾಕಿ ಕಿಡಿಕಾರಿದರು. ಅದಕ್ಕಾಗಿ 84 ಕುಟುಂಬಕ್ಕೆ ಸೂಕ್ತ ವಸತಿ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande