ಜಾತಿ ಗಣತಿ : ಮತಾಂತರಗೊಂಡ ಜಾತಿ ಪರಿಗಣನೆ-ಮುಖ್ಯಮಂತ್ರಿ
ಮೈಸೂರು, 13 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿ ಗಣತಿಯಲ್ಲಿ ಹೊಸ ಜಾತಿಗಳನ್ನು ಸರಕಾರ ಸೇರ್ಪಡೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿ
Cm


ಮೈಸೂರು, 13 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿ ಗಣತಿಯಲ್ಲಿ ಹೊಸ ಜಾತಿಗಳನ್ನು ಸರಕಾರ ಸೇರ್ಪಡೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಪರಿಗಣಿಸಲಾಗುವುದು. ಮತಾಂತರವಾಗುವುದು ಬೇಡ ಎಂದರೂ ವ್ಯವಸ್ಥೆಯ ಪರಿಣಾಮವಾಗಿ ಮತಾಂತರಗೊಳ್ಳುತ್ತಾರೆ. ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಸಮಾನ ಅವಕಾಶಗಳಿದ್ದರೆ, ಏಕೆ ಮತಾಂತರಗೊಳ್ಳುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಅಸ್ಪೃಶ್ಯತೆ ಏಕೆ ಬಂತು, ಅದನ್ನು ನಾವು ಹುಟ್ಟುಹಾಕಿದ್ದೇವೆಯೇ ಎಂದ ಅವರು ಅಸಮಾನತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಧರ್ಮದಲ್ಲಿ ಇದ್ದರೂ ಮತಾಂತರವಾಗಿದ್ದಾರೆ. ಅದು ಅವರ ಹಕ್ಕು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande