ರಾಯಚೂರು, 13 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಸಂಚಾರಿ ಆರೋಗ್ಯ ಘಟಕಗಳಿಗೆ 2025-26ನೇ ಸಾಲಿಗೆ ಮಂಜೂರಾಗಿರುವ ನಾನಾ ಹುದ್ದೆಗಳನ್ನು ರಾಷ್ಟೀಯ ಆರೋಗ್ಯ ಅಭಿಯಾನದ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಸೆ.15ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಹುದ್ದೆಗಳ ವಿವರ : ಎಂ.ಬಿ.ಬಿ.ಎಸ್. ವೈದ್ಯರು-08 ಹುದ್ದೆ, ಶುಶ್ರೂಷಕರು-08 ಹುದ್ದೆಗಳು ಹಾಗೂ ಪ್ರಯೋಗ ಶಾಲಾ ತಂತ್ರಜ್ಞರು-08 ಹುದ್ದೆಗಳು ಸೇರಿದಂತೆ ಒಟ್ಟು-24 ಹುದ್ದೆಗಳನ್ನು ಗುತ್ತಿಗೆ ಆಧಾರದ ನೇಮಕಾತಿಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ಮೇರಿಟ್ ಕಮ್ ರೋಷ್ಟರ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಅರ್ಹ ವಿದ್ಯಾರ್ಹತೆ ಹಾಗೂ ಗರಿಷ್ಠ 2 ವರ್ಷಗಳು ಸರ್ಕಾರಿ ಕ್ಷೇತ್ರದಲ್ಲಿ ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು, ಸೆಪ್ಟೆಂಬರ್ 15ರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಗುತ್ತಿಗೆ ಆಧಾರದ ನೇಮಕಾತಿಯು ಎನ್.ಹೆಚ್.ಎಂ. ನಿಯಮಾವಳಿಯ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ರಾಯಚೂರು ಇವರನ್ನು ಕಚೇರಿಯ ಸಮಯದಲ್ಲಿ ಸಂಪರ್ಕ ಮಾಡಬಹುದಾಗಿದೆ. ಅಥವಾ ಮೊಬೈಲ್ ಸಂಖ್ಯೆ : 9449843121ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್