ಮೈಸೂರು, 13 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ದಸರಾ ಉದ್ಘಾಟಕರ ವಿಚಾರದಲ್ಲಿ ಉದ್ಘಾಟನೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ ಎಂದರು.
ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು ಎಂದರು.
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೋಲಿಸರು ಕ್ರಮ ಕೈಗೊಳ್ಳುತ್ತಾರೆ ಎಂದರು.
ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ :
ಬಿಜೆಪಿ ನಾಯಕರಾದ ಸಿ.ಟಿ ರವಿ, ಬಸನಗೌಡ ಯತ್ನಾಳ್ ಅವರ ಮೇಲೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿಯವರು ಪ್ರಚೋದನಕಾರಿ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದು ರಾಜಕಾರಣವಲ್ಲ ಎಂದರು.
ಇದು ಹಿಂದೂಗಳನ್ನೇ ಗುರಿಯಾಗಿಸಿ ಮಾಡಿರುವ ಕೃತ್ಯ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa