ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿ
ರಾಯಚೂರು, 13 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಸ್ವೀಕರಿಸಿರುವ ಅರ್ಜಿಗಳಲ್ಲಿ ಅಭ್ಯರ್ಥಿಗಳ ವಾಸಸ್ಥಳದ ಹಾಗೂ ಇತರೆ ದಾಖಲಾತಿಗಳು ಸಲ್ಲಿಸದೇ
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿ


ರಾಯಚೂರು, 13 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಸ್ವೀಕರಿಸಿರುವ ಅರ್ಜಿಗಳಲ್ಲಿ ಅಭ್ಯರ್ಥಿಗಳ ವಾಸಸ್ಥಳದ ಹಾಗೂ ಇತರೆ ದಾಖಲಾತಿಗಳು ಸಲ್ಲಿಸದೇ ಇರುವ ಕಾರಣ ಅರ್ಜಿ ತಿರಸ್ಕೃತಗೊಂಡಿವೆ. ಮುಂದೆ ಈ ರೀತಿ ಮರುಕಳಿಸಬಾರದೆಂಬ ಹಾಗೂ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಇನ್ನು ಕೆಲ ದಿನಗಳಲ್ಲಿ ಸಹಾಯಕಿ ಹುದ್ದೆಯಿಂದ ಮುಂಬಡ್ತಿ ಹಾಗೂ ನಿವೃತ್ತಿ ಹೊಂದಿ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಅಭ್ಯರ್ಥಿಗಳು 10ನೇ ಹಾಗೂ ಪಿ.ಯು.ಸಿ. ತರಗತಿ ಅಂಕಪಟ್ಟಿ, ಅಂತರ ಪ್ರಮಾಣ ಪತ್ರ (ಪ್ರಸ್ತುತ), ವಾಸಸ್ಥಳ ಪ್ರಮಾಣ ಪತ್ರ (ಪ್ರಸ್ತುತ) ದಾಖಲಾತಿಗಳನ್ನು ಧೃಡೀಕರಣದೊಂದಿಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳ ಅವಶ್ಯಕತೆ ಇರುವ ಕಾರಣ ಮುಂಚಿತವಾಗಿ ಸಿದ್ಧಪಡಿಸಿಕೊಂಡು ಆನ್‍ಲೈನ್ ಮೂಲಕ ನಿಗದಿತ ಅವಧಿಯೊಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande