ಹಾಸನ, 13 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯನ್ನು ಏರ್ಪಡಿಸಲಾಗಿದೆ.
ಸೆ.15 ರಿಂದ 45 ದಿನಗಳ ಕಾಲ ತಾಲ್ಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳ ಎ.ಆರ್.ಟಿ ಕೇಂದ್ರಗಳಲ್ಲಿ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ. ಲಿಂಗತ್ವ ಅಲ್ಪಸಂಖ್ಯಾತರು ತಾಲ್ಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳ ಎ.ಆರ್.ಟಿ ಕೇಂದ್ರಗಳನ್ನು ಸಂಪರ್ಕಿಸಿ ನಿಖರ ಹಾಗೂ ಸ್ಪಷ್ಟವಾದ ಮಾಹಿತಿಯನ್ನು ನೀಡುವ ಮೂಲಕ ಸಮುದಾಯದ ಸರ್ವತೋಮುಖ ಅಭಿವೃದ್ದಿಗೆ ಆಗತ್ಯವಾದ ನೀತಿ ಘೋಷಣೆಗೆ ಮತ್ತು ಯೋಜನೆ ಅನುಷ್ಠಾನಕ್ಕೆ ಸಹಕಾರ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa