ವಿಜಯಪುರ, 13 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಹತ್ಯೆಗೈದು ಎಸ್ಕೇಪ್ ಆಗಿರುವ ಘಟನೆ ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ನಡೆದಿದೆ. ಆರೀಫ್ ಇನಾಂದಾರ್ ಹತ್ಯೆಯಾಗಿರುವ ವ್ಯಕ್ತಿ.
ದಿನನಿತ್ಯ ಉತ್ನಾಳ ಗ್ರಾಮದಿಂದ ಸಿಂದಗಿ ಬೈಪಾಸ್ ಬಳಿಯಿರುವ ಗ್ಯಾರೇಜ್‌ಗೆ ಆಗಮಿಸಿ ಕೆಲಸ ಮಾಡುತ್ತಿದ್ದನು. ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಕಾರಿನ ಮೇಲೆ ಅಟ್ಯಾಕ್ ಮಾಡಿ ಆರೀಫ್‌ನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. ಗೋಳಗುಮ್ಮಟ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande