ನಾಗಪುರ ದೀಕ್ಷಾಭೂಮಿ ಯಾತ್ರೆ : ಅರ್ಜಿ ಸಲ್ಲಿಕೆಗೆ ಸೆ.15 ಕೊನೆಯ ದಿನ
ರಾಯಚೂರು, 13 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಕಳುಹಿಸುವ ಕುರಿತು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ವಿಸ್
ನಾಗಪುರ ದೀಕ್ಷಾಭೂಮಿ ಯಾತ್ರೆ : ಅರ್ಜಿ ಸಲ್ಲಿಕೆಗೆ ಸೆ.15 ಕೊನೆಯ ದಿನ


ರಾಯಚೂರು, 13 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಕಳುಹಿಸುವ ಕುರಿತು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಅನುಯಾಯಿಗಳಿಗೆ ಬಸ್ಸು ಮತ್ತು ರೈಲಿನ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಕಲ್ಪಿಸಲಾಗುತ್ತಿದ್ದು, ದೀಕ್ಷಾಭೂಮಿಗೆ ಭೇಟಿ ನೀಡುವ ಅನುಯಾಯಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ ನಲ್ಲಿ ಆನ್‍ಲೈನ್ ಮೂಲಕ ಅರ್ಜಿಯನ್ನು ಸೆಪ್ಟೆಂಬರ್ 15ರವರೆಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಮೊಬೈಲ್ ಸಂಖ್ಯೆ: 9480843042 ಅಥವಾ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ: ರಾಯಚೂರು; 9480843184,

ಮಾನ್ವಿ: 1 9480843183, ಲಿಂಗಸುಗೂರು: 9480843182, ದೇವದುರ್ಗ: 9480843181, ಸಿಂಧನ್ರರು: 9480843185ಗೆ ಸಂಒರ್ಕ ಮಾಡಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande