ಮೊಸಳೆಹೊಸಳ್ಳಿಗೆ ಪ್ರತಿಪಕ್ಷ ನಾಯಕ ಅಶೋಕ
ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗಣಪತಿ ಮೆರವಣಿಗೆಯ ವೇಳೆ ಟ್ಯಾಂಕರ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ೮ ಜನರು ಬಲಿಯಾಗಿದ್ದು, ಅನೇಕರಿಗೆ ಗಾಯಗಳಾಗಿವೆ. ಈ ದುರ್ಘಟನೆಯ ಹಿನ್ನೆಲೆಯಲ್ಲಿ ರಾಜ್ಯ ವಿಧಾನ ಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಶನ
ಮೊಸಳೆಹೊಸಳ್ಳಿಗೆ ಪ್ರತಿಪಕ್ಷ ನಾಯಕ ಅಶೋಕ


ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗಣಪತಿ ಮೆರವಣಿಗೆಯ ವೇಳೆ ಟ್ಯಾಂಕರ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ೮ ಜನರು ಬಲಿಯಾಗಿದ್ದು, ಅನೇಕರಿಗೆ ಗಾಯಗಳಾಗಿವೆ. ಈ ದುರ್ಘಟನೆಯ ಹಿನ್ನೆಲೆಯಲ್ಲಿ ರಾಜ್ಯ ವಿಧಾನ ಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಶನಿವಾರ ಮೊಸಳೆಹೊಸಳ್ಳಿಗೆ ಭೇಟಿ ನೀಡಲಿದ್ದಾರೆ.

ಅವರು ಮೊದಲು ಮೃತರ ಮನೆಗಳಿಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿದ್ದು, ನಂತರ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಕ್ಷೇಮ ವಿಚಾರಿಸಲಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರ ಜೊತೆಗೂಡಿ ಅಪಘಾತದ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande