ನವದೆಹಲಿ, 13 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಸೆಪ್ಟೆಂಬರ್ 15ರವರೆಗೆ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಸೇರಿದಂತೆ ಐದು ರಾಜ್ಯಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಈ ಸಂದರ್ಭದಲ್ಲಿ ಸಾವಿರಾರು ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ, ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಪ್ರಧಾನಿಯವರ ಪ್ರವಾಸ ಇಂದು ಮಿಜೋರಾಂನಿಂದ ಆರಂಭವಾಗಲಿದೆ. ಬೆಳಿಗ್ಗೆ 10 ಗಂಟೆ ಸುಮಾರಿಗೆ ಐಜ್ವಾಲ್‌ನಲ್ಲಿ 9,000 ಕೋಟಿ ರೂ. ಮೌಲ್ಯದ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ನಂತರ ಮಧ್ಯಾಹ್ನ 12:30ಕ್ಕೆ ಮಣಿಪುರದ ಚುರಚಂದ್‌ಪುರದಲ್ಲಿ 7,300 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 2:30ಕ್ಕೆ ಇಂಫಾಲ್‌ನಲ್ಲಿ 1,200 ಕೋಟಿ ರೂ. ಮೌಲ್ಯದ ಯೋಜನೆಗಳ ಉದ್ಘಾಟನೆ ನೆರವೇರಿಸಿ, ಜನರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಮಿಜೋರಾಂ ಮತ್ತು ಮಣಿಪುರ ಪ್ರವಾಸದ ಬಳಿಕ, ಪ್ರಧಾನಿ ಮೋದಿ ಇಂದು ಸಂಜೆ ಅಸ್ಸಾಂ ರಾಜಧಾನಿ ಗುವಾಹಟಿಗೆ ತೆರಳಲಿದ್ದು, ಅಲ್ಲಿ ಭಾರತ ರತ್ನ ಭೂಪೇನ್ ಹಜಾರಿಕಾ ಅವರ ಜನ್ಮ ಶತಮಾನೋತ್ಸವ ಆಚರಣೆಗಳಲ್ಲಿ ಭಾಗವಹಿಸಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಿಲಿಟರಿ ಕಮಾಂಡರ್‌ಗಳ ಜಂಟಿ ಸಮ್ಮೇಳನವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa