ವಿಜಯಪುರ, 13 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮದ್ದೂರಿನಲ್ಲಿ ಮಾಡಿದ ಭಾಷಣಕ್ಕಾಗಿ ನನ್ನ ಮೇಲೆ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಮ್ಮ X ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಸರ್ಕಾರ ಅದೆಷ್ಟೇ ಪ್ರಕರಣ ಗಳನ್ನು ಹಾಕಿದರೂ ಸಹ ನಾನು ವಿಚಲಿತನಾಗುವುದಿಲ್ಲ. ಗೋ ಮಾತೆಯ ಕೆಚ್ಚಲನ್ನು ಕತ್ತರಿಸಿದಾಗ, ಗಣೇಶ ವಿಸರ್ಜನೆ ನಡೆಯುತ್ತಿರುವಾಗ ಕಲ್ಲು ತೂರಾಟ ನಡೆಸಿದವರ ಮೇಲೆ, ಮಸೀದಿಯಲ್ಲಿ ಕಲ್ಲು ಶೇಖರಣೆ ಮಾಡಿ ಗಣೇಶೋತ್ಸವ ಹೋಗುತ್ತಿರುವಾಗ ಕಲ್ಲು ತೂರಿದವರ ಮೇಲೆ ಮೊದಲು ಕ್ರಮ ಕೈಗೊಳ್ಳಲಿ ಎಂದಿದ್ದಾರೆ.
ಇನ್ನು ಹಿಂದೂಗಳ ಉತ್ಸವ, ಆಚರಣೆಗಳನ್ನು ಗುರಿಯಾಗಿಸಿಕೊಂಡು ಶಾಂತಿ ಕದಡುತ್ತಿರುವ ದುಷ್ಟ ಶಕ್ತಿಗಳ ಹೆಡೆಮುರಿಕಟ್ಟಲು ಆಗದ ರಾಜ್ಯ ಸರ್ಕಾರ ಹಿಂದೂಗಳ ಹಕ್ಕುಗಳನ್ನು ಪ್ರತಿಪಾದಿಸಿದ ನಮ್ಮಂತವರ ಮೇಲೆ ಕೇಸು ಹಾಕುತ್ತಿದೆ. ಕಾಂಗ್ರೆಸ್ ಪಕ್ಷದ ಅಂತ್ಯ ಮದ್ದೂರಿನಿಂದಲೇ ಪ್ರಾರಂಭವಾಗಲಿದೆ. ಇದಕ್ಕೆ ಮೊನ್ನೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಹಿಂದೂಗಳೇ ಸಾಕ್ಷಿ. ಹೆದರಿಸುವ, ಬೆದರಿಸುವ ಪ್ರಯತ್ನಕ್ಕೆ ಜಗ್ಗುವ ಮಾತೆ ಇಲ್ಲ. ಜೈ ಶ್ರೀ ರಾಮ ಎಂದು ಟ್ವೀಟ್ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande