ಬೆಂಗಳೂರು, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಅವಾಚ್ಯ ಪದಗಳಿಂದ ನಿಂದಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನೊಬ್ಬನ ಮೇಲೆ ಆರೋಪಿ ಹಲ್ಲೆಗೈದಿದ್ದರಿಂದಾಗಿ ಆತ ಸಾವಿಗೀಡಾಗಿರುವ ಘಟನೆ ನಗರದಲ್ಲಿ ನಡೆದಿದೆ. ಬಿಹಾರದ ಬೇಗುಸರಾಯ್ ಮೂಲದ ಕಾರ್ಮಿಕ ಭೀಮ್ ಕುಮಾರ್ (25) ಮೃತರು. ಮೃತನ ಸ್ನೇಹಿತರ ದೂರಿನನ್ವಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸಲ್ಮಾನ್‌ಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ