ಬಳ್ಳಾರಿ, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಆಮ್ ಆದ್ಮಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಕಾರ್ಯಕಾರಿಣಿ ಸಭೆಯು ಭಾನುವಾರ ನಡೆಯಿತು. ಬಳ್ಳಾರಿ ಜಿಲ್ಲಾ ಅಧ್ಯಕ್ಷರಾದ ಜೆ. ವಿ. ಮಂಜುನಾಥ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಇಂದಿರಾ, ಜಿಲ್ಲಾ ಕಾರ್ಮಿಕ ಸಂಘಟನೆಯ ಅಧ್ಯಕ್ಷರಾದ ವಿ. ಹುಲುಗಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಗಣಪಾಲ್ ರಾಘವರೆಡ್ಡಿ, ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮಣಿಕಂಠ ಆಚಾರ್, ಜಿಲ್ಲಾ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮ ಘಟಕದ ಅಧ್ಯಕ್ಷ ಕೆ.ಎಸ್. ಲುಕ್ಮಾನ್, ಆಟೋ ಘಟಕದ ನಾಗರಾಜ್, ಬೆಳಗಲ್ಲು ಬಸವ, ಮುಂಚೂಣಿ ನಾಯಕರುಗಳಾದ ನರೇಂದ್ರ, ವೆಂಕಟೇಶ್, ಮೃತ್ಯುಂಜಯ, ಪ್ರಕಾಶ್, ಹಾಗೂ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
ಜೆ.ವಿ. ಮಂಜುನಾಥ್ ಅವರು ಸಭೆಯ ಅಧ್ಯಕ್ಷತೆವಹಿಸಿ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯ 28 ಜಿಲ್ಲಾ ಪಂಚಾಯತಿ ಹಾಗೂ 80 ತಾಲೂಕು ಕ್ಷೇತ್ರಗಳಿಗೆ ಮೀಸಲಾತಿ ಶೀಘ್ರದಲ್ಲೇ ಪ್ರಕಟವಾಗಲಿದೆ. ಆಮ್ ಆದ್ಮಿ ಪಕ್ಷವು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲು ಬೂತ್‍ಮಟ್ಟದಿಂದ ಅಭ್ಯರ್ಥಿಗಳನ್ನು ಗುರುತಿಸಿ - ಮತದಾರರನ್ನು ಸಂಘಟಿಸಬೇಕು ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್