ಗದಗ, 14 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಗದಗ ಜಿಲ್ಲಾಡಳಿತ ಭವನದಿಂದ ರವಿವಾರ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಗದಗನಿಂದ ಬೆಂಗಳೂರಿಗೆ ಬೈಕ್ ರ‍್ಯಾಲಿ ಏರ್ಪಡಿಸಲಾಗಿತ್ತು.
ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ ಅವರು ಬೈಕ್ ರ್ಯಾಲಿಗೆ ಜಿಲ್ಲಾಡಳಿತ ಭವನದ ಆವರಣದಿಂದ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿ ರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಶರಣು ಗೊಗೇರಿ ಸೇರಿದಂತೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP