ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಿ.ಸಿ ಟಿ.ವಿ : ಸಂಸದ ಕೆ.ರಾಜಶೇಖರ ಹಿಟ್ನಾಳ
ಕೊಪ್ಪಳ, 14 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಿ.ಸಿ ಟಿ.ವಿ.ಗಳನ್ನು ಅಳವಡಿಸಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನೆರವೇರಿಸಲಾಯಿತು ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು.
ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಿ.ಸಿ ಟಿ.ವಿ ಅಳವಡಿಸಲಾಗಿದೆ- ಸಂಸದ ಕೆ.ರಾಜಶೇಖರ ಹಿಟ್ನಾಳ


ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಿ.ಸಿ ಟಿ.ವಿ ಅಳವಡಿಸಲಾಗಿದೆ- ಸಂಸದ ಕೆ.ರಾಜಶೇಖರ ಹಿಟ್ನಾಳ


ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಿ.ಸಿ ಟಿ.ವಿ ಅಳವಡಿಸಲಾಗಿದೆ- ಸಂಸದ ಕೆ.ರಾಜಶೇಖರ ಹಿಟ್ನಾಳ


ಕೊಪ್ಪಳ, 14 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಿ.ಸಿ ಟಿ.ವಿ.ಗಳನ್ನು ಅಳವಡಿಸಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನೆರವೇರಿಸಲಾಯಿತು ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು.

ಕೊಪ್ಪಳ ಜಿಲ್ಲಾಡಳಿತ ಭವದಲ್ಲಿರುವ ಲೋಕಸಭಾ ಸದಸ್ಯರ ಕಛೇರಿಯಲ್ಲಿ ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಅಳವಡಿಸಲಾಗಿರುವ ಸಿ.ಸಿ ಟಿ.ವಿ.ಗಳ ಕುರಿತು ಮಾಹಿತಿ ನೀಡಲು ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಆಗಸ್ಟ್-2024ರ ಅಂತ್ಯದಲ್ಲಿ ಸುಮಾರು 190 ಅಪಘಾತಗಳು ಉಂಟಾಗುತ್ತಿದ್ದು, ಅದರಲ್ಲಿ 59 ಸಾವುಗಳು ಸಂಭವಿಸಿದ್ದವು. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಜಿಲ್ಲಾ ಪೋಲಿಸ್ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಪರಿಶಿಲಿಸಿದಾಗ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ವಣಬಳ್ಳಾರಿ, ಬೂದಗುಂಪಾ ಕ್ರಾಸ್, ಅಮರೇಶ್ವರ ದೇವಸ್ಥಾನ ಕ್ರಾಸ್, ತುಂಗಭದ್ರಾ ನದಿ ಸೇತುವೆ-1 ಹತ್ತಿರ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಇದಕ್ಕೆ ವಾಹನಗಳ ಅತಿಯಾದ ವೇಗವಾದ ಸಂಚಾರವೇ ಕಾರಣ ಎಂಬುದು ತಿಳಿದಿರುತ್ತದೆ. ಈ ಹಿನ್ನೆಲೆಯಲ್ಲಿ ಅಪಘಾತ ವಲಯವಾದ ಈ ಸ್ಥಳಗಳಲ್ಲಿ ಅನುಮತಿಸಿದ ವೇಗಕ್ಕಿಂತ ಹೆಚ್ಚು ವೇಗವಾಗಿ ಸಂಚರಿಸುವ ವಾಹನಗಳ ಮೇಲೆ ನಿಯಂತ್ರಣ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ 50ರಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ವಾಹನ ವೇಗ ನಿಯಂತ್ರಣ ಮಾಡಲು ಸೆಕ್ಯೂರಿಟಿ ಸಿಸ್ಟಮ್ & ಸಿಸಿ ಟಿವಿ ಅಳವಡಿಕೆಗಾಗಿ ಕೇಂದ್ರ ರಸ್ತೆ ಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದು, ಇದಕ್ಕಾಗಿ ರೂ. 2 ಕೋಟಿ 5 ಲಕ್ಷಗಳನ್ನು ಮಂಜೂರು ಮಾಡಿದ್ದಾರೆ. ಇದರಲ್ಲಿ ರೂ. 1 ಕೋಟಿ 39 ಲಕ್ಷ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್.ಹೆಚ್.ಎ.ಐ) ವತಿಯಿಂದ ವಣಬಳ್ಳಾರಿ, ಬೂದಗುಂಪಾ ಕ್ರಾಸ್, ಅಮರೇಶ್ವರ ದೇವಸ್ಥಾನ ಕ್ರಾಸ್, ತುಂಗಭದ್ರಾ ನದಿ ಸೇತುವೆ-1 ಮತ್ತು ಮುನಿರಾಬಾದ್ ಪೋಲಿಸ್ ಠಾಣೆಯಲ್ಲಿ ಸಿಸಿ ಟಿವಿ ಅಳವಡಿಕೆ ಮಾಡಲಾಗಿದೆ. ರೂ.‌ 70 ಲಕ್ಷ ವೆಚ್ಚದಲ್ಲಿ ಜಂಕ್ಷನ್ ಸ್ಥಳಗಳಲ್ಲಿ ಬೆಳಕಿನ ಸೌಲಭ್ಯ ಒದಗಿಸಲು ತುಂಗಭದ್ರಾ ನದಿ ಸೇತುವೆ-1, ಅಮರೇಶ್ವರ ದೇವಸ್ಥಾನ ಕ್ರಾಸ್, ವಣಬಳ್ಳಾರಿ, ಬೇವೂರ ಕ್ರಾಸ್, ಹಿರೇವಂಕಲಕುಂಟಾ, ತುಂಗಭದ್ರಾ ನದಿ ಸೇತುವೆ-2, ಈ ಸ್ಥಳಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸ ಮಾಡಲಾಗುತ್ತಿದೆ. ಸಿಸಿ ಟಿವಿ ಅಳವಡಿಕೆಯಿಂದ ಅಪರಾಧಗಳನ್ನು ತಡೆಗಟ್ಟಲು, ಅಪಘಾತಕ್ಕೀಡಾದ ಮತ್ತು ಓಡಿಹೋದ ಪ್ರಕರಣಗಳಲ್ಲಿ ವಾಹನಗಳನ್ನು ಪತ್ತೆಹಚ್ಚಲು, ರಸ್ತೆ ಅಪಘಾತಗಳನ್ನು ತಪ್ಪಿಸಲು ಅತಿ ವೇಗವನ್ನು ಪರಿಶೀಲಿಸಲು ಸಮಗ್ರ ಕಣ್ಣಾವಲು ಮತ್ತು ಮೇಲ್ವಿಚಾರಣೆ ಮಾಡಲು ಪೊಲೀಸ್ ಇಲಾಖೆಗೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

*ರಾಷ್ಟ್ರೀಯ ಹೆದ್ದಾರಿಯಲ್ಲಿ ವಿವಿಧ ಯೋಜನೆಗಳು:* ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದ್ದು, ರೂ. 28.89 ಕೋಟಿ ವೆಚ್ಚದಲ್ಲಿ ಮೆತಗಲ್ ಕ್ರಾಸ್, ರೂ. 27.28 ಕೋಟಿ ವೆಚ್ಚದಲ್ಲಿ ಶಹಪೂರ, ರೂ. 19.43 ಕೋಟಿ ವೆಚ್ಚದಲ್ಲಿ ಹಿಟ್ನಾಳ ಕ್ರಾಸ್ ಮತ್ತು ರೂ. 29.04 ಕೋಟಿ ವೆಚ್ಚದಲ್ಲಿ ಹುಲಗಿ ಕ್ರಾಸ್ ಸೇರಿದಂತೆ ಒಟ್ಟು ರೂ.104.64 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಾಲ್ಕು ಮೇಲ್ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.

ಇದಲ್ಲದೇ ರಾಷ್ಟ್ರೀಯ ಹೆದ್ದಾರಿ-150ಎ ರಲ್ಲಿ ತೆಕ್ಕಲಕೋಟೆಯಿಂದ ಸಿರಗುಪ್ಪ ಪಟ್ಟಣದ ಮೂಲಕ ಇಬ್ರಾಹಿಮ್‌ರವರೆಗೆ ರೂ.72 ಕೋಟಿ ಅನುದಾನದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ರಾಷ್ಟ್ರೀಯ ಹೆದ್ದಾರಿ-367 (ಭಾನಾಪೂರ-ಗದ್ದನಕೇರಿ ಕ್ರಾಸ್)ನ್ನು ರಾಷ್ಟ್ರೀಯ ಹೆದ್ದಾರಿ-50ಕ್ಕೆ ಸಂಪರ್ಕ ಕಲ್ಪಿಸುವ ಕಾಮಗಾರಿಗೆ 2025-26ನೇ ಸಾಲಿನ ಬಜೆಟ್‌ನಲ್ಲಿ ಕಾಮಗಾರಿ ಅನುಮೋದನೆಯಾಗಿರುತ್ತದೆ. ಡಿ.ಪಿ.ಆರ್ ತಯಾರಿಸುವ ಹಂತದಲ್ಲಿರುತ್ತದೆ. ಒನ್ ಟೈಮ್ ಇಂಪ್ರುಮೆಂಟ್ ರೋಡ್ (One Time Improvement Road) ಕೊಪ್ಪಳ ಪಟ್ಟಣದಲ್ಲಿ ಯೋಜನೆಯಡಿಯಲ್ಲಿ ಅಭಯ್ ಸಾಲವೆಂಟ್‌ದಿಂದ ಹೊಸಪೇಟೆ ರಸ್ತೆವರೆಗಿನ ಸೇತುವೆ ವರೆಗೆ ಮತ್ತು ಶಿಲ್ಪಾ ಗ್ರಾಂಡ್ ಹೋಟೆಲ್‌ನಿಂದ ದದೇಗಲ್ ಹತ್ತಿರ ಇರುವ ಸೇತುವೆ ವರೆಗೆ ರಸ್ತೆ ನಿರ್ಮಾಣ ಮಾಡುವುದು. ಸಿರಗುಪ್ಪ ಪಟ್ಟಣದಲ್ಲಿ ಒನ್ ಟೈಮ್ ಇಂಪ್ರುಮೆಂಟ್ ರೋಡ್ ನಿರ್ಮಾಣ ಮಾಡಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ. ಅನುಮೋದನೆ ಹಂತದಲ್ಲಿರುತ್ತದೆ ಎಂದು ಸಂಸದರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದರ ಆಪ್ತ ಸಹಾಯಕರಾದ ಅರುಣ ಮತ್ತು ವೀರಭದ್ರಪ್ಪ ನಾಯಕ ಸೇರಿದಂತೆ ವಿವಿಧ ಮಾಧ್ಯಮ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

*ರಾಷ್ಟ್ರೀಯ ಹೆದ್ದಾರಿ-50ರ ಸಿ.ಸಿ ಟಿ.ವಿ ಉದ್ಘಾಟನಾ ಕಾರ್ಯಕ್ರಮ:* ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಅಳವಡಿಸಲಾದ ಸಿ.ಸಿ ಟಿ.ವಿ.ಗಳ ಉದ್ಘಾಟನಾ ಕಾರ್ಯಕ್ರಮವು ಶನಿವಾರ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಹೇಮಂತ್ ಕುಮಾರ್, ಕೊಪ್ಪಳ ಡಿವೈಎಸ್ಪಿ ಮುತ್ತಣ್ಣ ಸವರಗೋಳ ಸೇರಿದಂತೆ ಇತರೆ ಜನಪ್ರತಿನಿಧಿಗಳು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಮತ್ತಿತರರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande