ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ರಾಯಚೂರು, 14 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸೆಪ್ಟೆಂಬರ್ 15ರಂದು ಬೆಳಗ್ಗೆ 7 ಗಂಟೆಗೆ ಯಕ್ಲಾಸಪುರ ಬಳಿಯ ಜಿಲ್ಲಾಡಳಿತ ಭವನದಿಂದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ


ರಾಯಚೂರು, 14 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸೆಪ್ಟೆಂಬರ್ 15ರಂದು ಬೆಳಗ್ಗೆ 7 ಗಂಟೆಗೆ ಯಕ್ಲಾಸಪುರ ಬಳಿಯ ಜಿಲ್ಲಾಡಳಿತ ಭವನದಿಂದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಸೈಕಲ್ ರಾಲಿ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 10 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಂವಿಧಾನ ಪೀಠಿಕೆ ವಾಚನ ನಡೆಯಲಿದೆ. ಜೊತೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳ ಚಿತ್ರಕಲಾ ಶಿಕ್ಷಕರು ರಚಿಸಿರುವ ಸ್ಥಬ್ಧ ಚಿತ್ರ ಅನಾವರಣ ಕಾರ್ಯಕ್ರಮವಿದೆ.

ತಾಲ್ಲೂಕು, ಜಿಲ್ಲಾಮಟ್ಟದ ನನ್ನ ಮತ ನನ್ನ ಹಕ್ಕು, ಸಂವಿಧಾನ ಪೀಠಿಕೆ ಮತ್ತು ಗಾಂಧಿ ಭಾರತ ವಿಷಯಗಳ ಬಗ್ಗೆ ಭಾಷಣ, ಚಿತ್ರಕಲೆ ಮತ್ತು ಛಾಯಾಚಿತ್ರ ಸ್ಪರ್ಧೆಗಳಿಗೆ ಇದೆ ವೇಳೆ ಚಾಲನೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande