ವಿಜಯಪುರ, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರದ ನವರಸಪುರ ಶಾಖಾ ವ್ಯಾಪ್ತಿಯಲ್ಲಿ ಹೆಚ್.ಟಿ ವಾಹಕ ಬದಲಾವಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದರಿಂದ ಸೇನಾ ನಗರ ಫೀಡರ್‌ನ ಮೇಲೆ ಬರುವ ಟ್ರೇಸರಿ ಕಾಲೋನಿ, ರಾಮದೇವ ನಗರ,ಅಯ್ಯಪ್ಪ ಸ್ವಾಮಿ ದೇವಸ್ಥಾನ,ಇಟಗಿ ಕಾಲೋನಿ, ವೇದಾಂತ ಹಾಸ್ಪಿಟಲ್, ನಿಂಬರಗಿ ಬಡಾವಣೆ, ಕುಲಕರ್ಣಿ ಲೇಔಟ್, ಖುರೇಷಿ ಕಾಲೋನಿ ಹತ್ತಿರದ ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸುವಂತೆ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande