ರಾಯಚೂರು, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ನಿಮಿತ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸೆ.15ರಂದ ಬೆಳಗ್ಗೆ 7 ಗಂಟೆಗೆ ನಗರದ ಮಹಾತ್ಮ ಗಾಂಧಿ ಸ್ಟೇಡಿಯಂನಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ.
ಈ ಸೈಕಲ್ ಜಾಥಾದಲ್ಲಿ 14 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ಸಾರ್ವಜನಿಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು ಹಾಗೂ ಸದಸ್ಯರು ಸೇರಿದಂತೆ ಎಲ್ಲರು ಭಾಗವಹಿಸಬಹುದಾಗಿದೆ.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಎಲ್ಲರೂ ಭಾಗವಹಿಸಿ, ನನ್ನ ಮತ ನನ್ನ ಹಕ್ಕು ಎಂಬ ಧ್ಯೇಯ ವಾಕ್ಯದೊಂದಿಗೆ ಮಹತ್ವದ ಆಶಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್