ನವದೆಹಲಿ, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅಮಿತ್ ಖರೆ ಅವರನ್ನು ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಸಂಪುಟ ನೇಮಕಾತಿ ಸಮಿತಿಯ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಈ ಆದೇಶ ಹೊರಡಿಸಿದೆ.
1985ರ ಜಾರ್ಖಂಡ್ ಕೇಡರ್‌ನ ಖರೆ ಅವರು ಮುಂದಿನ ಮೂರು ವರ್ಷಗಳ ಕಾಲ ಒಪ್ಪಂದದ ಆಧಾರದ ಮೇಲೆ ಕಾರ್ಯನಿರ್ವಹಿಸಲಿದ್ದಾರೆ. ಪ್ರಧಾನ ಮಂತ್ರಿಗಳ ಸಲಹೆಗಾರರಾಗಿ, ಮಾಹಿತಿ-ಪ್ರಸಾರ ಕಾರ್ಯದರ್ಶಿಯಾಗಿ, ಶಿಕ್ಷಣ ಕಾರ್ಯದರ್ಶಿಯಾಗಿ ಸೇರಿದಂತೆ ಹಲವು ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಖರೆ, ರಾಷ್ಟ್ರೀಯ ಶಿಕ್ಷಣ ನೀತಿ 2020 ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa