ರಾಯಚೂರು, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಯುವನಿಧಿ ಫಲಾನುಭವಿಗಳು ಯೋಜನೆಯಡಿ ಪಡೆಯುತ್ತಿರುವ ನಿರುದ್ಯೋಗ ಭತ್ಯೆಯನ್ನು ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತಾ ತರಬೇತಿ ಪಡೆಯಲು ಕೌಶಲ್ಯಕರ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊ0ಡು ತರಬೇತಿ ಪಡೆದರೆ ನಿರುದ್ಯೋಗ ಭತ್ಯೆ ತಡೆಹಿಡಿಯಲಾಗುತ್ತದೆಂದು ಭಾವಿಸಿ ಕೌಶಲ್ಯಕರ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಹಿಂಜರಿಯುತ್ತಿರುವುದಾಗಿ ತಿಳಿದು ಬಂದಿರುತ್ತದೆ.
ಆದರೆ, ತರಬೇತಿಯನ್ನು ಪಡೆದರೂ ಸರ್ಕಾರವು ನಿಗದಿಪಡಿಸಿರುವ ಅವಧಿಯವರೆಗೆ ನಿರುದ್ಯೋಗ ಭತ್ಯೆಯನ್ನು ಪಡೆಯಲು ಯಾವುದೇ ತೊಂದರೆಗಳು ಇರುವುದಿಲ್ಲ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
2024-25 ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ 213 ರಲ್ಲಿ ಯುವನಿಧಿ ಪ್ಲಸ್ ಉಪ ಕ್ರಮದಡಿ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ನೀಡುತ್ತಿರುವ ಕೋರ್ಸ್ಗಳಲ್ಲಿ ಅಭಿವೃದ್ಧಿ ವಿಷಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು ರಾಜ್ಯದ 25,000 ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದೆಂದು ಘೋಷಿಸಲಾಗಿದೆ.
ಅದರಂತೆ. ಯುವನಿಧಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊ0ಡು ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ/ಯುವತಿಯರಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತಾ ತರಬೇತಿಯನ್ನು ಜಿಟಿಟಿಸಿ, ಸಿಡಾಕ್, ಕರ್ನಾಟP ಐಟಿಐ ಉದ್ಯೋಗ ಸೋಸೈಟಿ, ಕರ್ನಾಟಕ ಜರ್ಮನ್ ಬಹು ಕೌಶಲ್ಯ ಅಭಿವೃದ್ಧಿ ನಿಗಮ, ಮೋಕ್ಷಗೊಂಡ ತರಬೇತಿ ಸಂಸ್ಥೆ ಇವರ ಮುಖಾಂತರ ಆಯೋಜಿಸಲು ಉದ್ದೇಶಿಸಲಾಗಿರುತ್ತದೆ.
ಯುವನಿಧಿ ಯೋಜನೆಯಡಿಯಲ್ಲಿ ನೋಂದಾಯಿಸಿ ನೇರ ನಗದು ವರ್ಗಾವಣೆ ಮೂಲಕ ನಿರಂತರವಾಗಿ 6 ತಿಂಗಳು ನಿರುದ್ಯೋಗ ಭತ್ಯೆಯನ್ನು ಪಡೆಯುತ್ತಿರುವ ಫಲಾನುಭವಿಗಳು ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತಾ ತರಬೇತಿಯನ್ನು ಪಡೆಯಲು ಕೌಶಲ್ಯಕರ್ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳತಕ್ಕದ್ದು ಹಾಗೂ ಒಂದು ವೇಳೆ ತರಬೇತಿಯನ್ನು ಪಡೆಯಲು ಕೌಶಲ್ಯಕರ್ ಪೊರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳದೆ ಇದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನಿರುದ್ಯೋಗ ಭತ್ಯೆಯನ್ನು ಸ್ಥಗಿತಗೊಳಿಸಲಾಗುವುದು ಎಂಬ ಷರತ್ತನ್ನು ವಿಧಿಸಲಾಗಿರುತ್ತದೆ.
ಆದುದರಿಂದ, ಎಲ್ಲಾ ಯುವನಿಧಿ ಫಲಾನುಭವಿಗಳು ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಲು ಕೌಶಲ್ಯಕರ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವAತೆ ಜಿಲ್ಲೆಯ ನಿರುದ್ಯೋಗ ಯುವಕ/ಯುವತಿಯರಿಗೆ ಈ ಮೂಲಕ ತಿಳಿಸಲಾಗಿದೆ ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್