ಮನಸ್ತಾಪ ಮರೆತು ಒಂದಾದ 10 ಜೋಡಿಗಳು
ಕೊಪ್ಪಳ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಮಧ್ಯಸ್ತಿಕೆಕಾರ ವಕೀಲರು ಹಾಗೂ ನ್ಯಾಯಾಧೀಶರ ಮಾರ್ಗದರ್ಶನದಿಂದ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ 10 ದಂಪತಿ, ಮನಸ್ತಾಪ ಮರೆತು ಮತ್ತೆ ಒಂದಾದರು. ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳಲ್ಲಿ ವಿ
ಮನಸ್ತಾಪ ಮರೆತು ಒಂದಾದ 10 ಜೋಡಿಗಳು


ಕೊಪ್ಪಳ, 15 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಮಧ್ಯಸ್ತಿಕೆಕಾರ ವಕೀಲರು ಹಾಗೂ ನ್ಯಾಯಾಧೀಶರ ಮಾರ್ಗದರ್ಶನದಿಂದ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ 10 ದಂಪತಿ, ಮನಸ್ತಾಪ ಮರೆತು ಮತ್ತೆ ಒಂದಾದರು.

ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳಲ್ಲಿ ವಿಮೆ, ನೀರಿನ ಬಿಲ್, ಬ್ಯಾಂಕ್ ಸಾಲ, ಮನೆ ಕರ, ಕೌಟುಂಬಿಕ ದೌರ್ಜನ್ಯ, ಜೀವನಾಂಶ, ಚೆಕ್ ಬೌನ್ಸ್ ಪ್ರಕರಣಗಳು, ಜನನ ಮರಣ, ಸಿವಿಲ್ ಕೇಸ್, ಕ್ರಿಮಿನಲ್ ಕೇಸ್, ಮೋಟಾರ್ ವಾಹನ ಅಪಘಾತ, ಎಂಎಂಆರ್‌ಡಿ ಪ್ರಕರಣಗಳು ಹಾಗೂ ಇತ್ಯಾದಿ ಸೇರಿದಂತೆ ದಾಖಲಾದ ಒಟ್ಟು 6,873 ಪ್ರಕರಣಗಳಲ್ಲಿ 5,287 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು.

ವಿಮೆ, ನೀರಿನ ಬಿಲ್, ಮೋಟಾರ್ ವಾಹನ ಅಪಘಾತ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಒಟ್ಟು ರೂ. 22,16,64,125/- ಮೌಲ್ಯದ ಪರಿಹಾರ ಮೊತ್ತವನ್ನು ಸಂತ್ರಸ್ತರಿಗೆ ನೀಡಲಾಯಿತು. ಪೂರ್ವ ದಾವೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 51,306 ಪ್ರಕರಣಗಳ ಪೈಕಿ 43,676 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಇತ್ಯರ್ಥ ಪಡಿಸಲಾದ ಒಟ್ಟು ಮೌಲ್ಯ 5,95,15,527/- ಇದ್ದು, ಒಟ್ಟಾರೆ ಒಂದೇ ದಿನದಲ್ಲಿ ಒಟ್ಟು 58,182 ಪ್ರಕರಣಗಳ ಪೈಕಿ 48,966 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇತ್ಯರ್ಥಪಡಿಸಲಾದ ಒಟ್ಟು ಮೌಲ್ಯ 28,19,54,652/-ಇರುತ್ತದೆ.

ಈ ಬಾರಿ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಲು ಸಹಕಾರ ನೀಡಿದ ಗೌರವಾನ್ವಿತ ನ್ಯಾಯಾಧೀಶರು, ವಕೀಲರು, ಕಕ್ಷಿಗಾರರು, ಮಧ್ಯಸ್ತಿಕೆಗಾರ ವಕೀಲರುಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಅಭಿನಂದನೆಗಳನ್ನು ತಿಳಿಸಲಾಗಿದೆ ಎಂದು ಪ್ರಾಧಿಕಾರದ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande