ಶಕ್ತಿ ನಗರ ರಾಯಚೂರಲ್ಲಿ ಪ್ರಜಾಪ್ರಭುತ್ವ ದಿನಾಚರಣೆ
ರಾಯಚೂರು, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸೈಕಲ್ ಜಾಥಾ, ಸಂವಿಧಾನ ಪೀಠಿಕೆ ವಾಚನ, ಸ್ಪರ್ಧೆಗಳಿಗೆ ಚಾಲನೆ ಸೇರಿದಂತೆ ನಾನಾ ಕಾರ್ಯಕ್ರಮಗಳ ಮೂಲಕ ಸೆಪ್ಟೆಂಬರ್ 15ರಂದು ಜಿಲ್ಲಾಡಳಿತದಿಂದ ರಾಯಚೂರ ಜಿಲ್ಲೆಯಲ್ಲಿ ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪೂರ್ವ ನಿಗದಿಯಂತ
ಶಕ್ತಿ ನಗರ ರಾಯಚೂರಲ್ಲಿ ಪ್ರಜಾಪ್ರಭುತ್ವ ದಿನಾಚರಣೆ


ರಾಯಚೂರು, 15 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸೈಕಲ್ ಜಾಥಾ, ಸಂವಿಧಾನ ಪೀಠಿಕೆ ವಾಚನ, ಸ್ಪರ್ಧೆಗಳಿಗೆ ಚಾಲನೆ ಸೇರಿದಂತೆ ನಾನಾ ಕಾರ್ಯಕ್ರಮಗಳ ಮೂಲಕ ಸೆಪ್ಟೆಂಬರ್ 15ರಂದು ಜಿಲ್ಲಾಡಳಿತದಿಂದ ರಾಯಚೂರ ಜಿಲ್ಲೆಯಲ್ಲಿ ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಪೂರ್ವ ನಿಗದಿಯಂತೆ ಬೆಳ್ಳಂಬೆಳಗ್ಗೆ 7 ಗಂಟೆ ಹೊತ್ತಿಗೆ ಯಕ್ಲಾಸಪುರ ಬಳಿಯ ನೂತನ ಜಿಲ್ಲಾಡಳಿತ ಭವನದಿಂದ ಬೈಕ್ ರ‍್ಯಾಲಿ ಆಯೋಜನೆ ಮಾಡಲಾಗಿತ್ತು. ‘ನನ್ನ ಮತ ನನ್ನ ಹಕ್ಕು’ ಎಂಬ ಧ್ಯೇಯ ವಾಕ್ಯದೊಂದಿಗೆ ಮಹತ್ವದ ಆಶಯದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ನಿಮಿತ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜನೆಯಾಗಿದ್ದ ಸೈಕಲ್ ರ್ಯಾಲಿಯಲ್ಲಿ ಪುರುಷರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ಸಾರ್ವಜನಿಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು ಸೇರಿದಂತೆ ಹಲವಾರು ವರ್ಗದ ಜನರು ಭಾಗಿಯಾಗಿ ರ್ಯಾಲಿಗೆ ಮೆರುಗು ತಂದರು.

ನಿತ್ಯ ಒಂದಿಲ್ಲೊಂದು ಒತ್ತಡದಲ್ಲಿರುವ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ಸಹ ಸೈಕಲ್ ರ್ಯಾಲಿಯಲ್ಲಿ ಭಾಗಿಯಾಗಿ ಗಮನ ಸೆಳೆದರು. ಜಿಲ್ಲಾಡಳಿತ ಭವನದ ಆವರಣದಲ್ಲಿ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿಂಧು ರಘು ಹೆಚ್ ಎಸ್. ಹಾಗೂ ಆದಿ ಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಾಜೇಂದ್ರ ಜಲ್ದಾರ್ ಅವರು ಹಸಿರು ನಿಸಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಲ್ಲಿಂದ ಆರಂಭವಾದ ರ್ಯಾಲಿಯು ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ಸೇರಿತು.

ಬೆಳಗ್ಗೆ ಬಿಸಲೇರುವ ಹೊತ್ತಿಗೆ ನಗರದ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಹಬ್ಬದ ಸಂಭ್ರಮ ಕಂಡು ಬಂದಿತು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸಂವಿಧಾನ ಪೀಠಿಕೆ ಬೋಧನೆ ಮತ್ತು ವಿವಿಧ ಸ್ಪರ್ಧೆಗಳ ಚಾಲನಾ ಕಾರ್ಯಕ್ರಮವು ಅಚ್ಚುಕಟ್ಟಾಗಿ ಏರ್ಪಾಡಾಗಿತ್ತು.

ಈ ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಉಪಾಧ್ಯಕ್ಷರಾದ ಬಶೀರ್ ಅಹ್ಮದ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಎರಡನೇ ಹೆಚ್ಚುವರಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕುಮಾರಸ್ವಾಮಿ ಸೇರಿದಂತೆ ಹಲವಾರು ಗಣ್ಯರು, ಅಧಿಕಾರಿಗಳು ಭಾಗಿಯಾಗಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.

ಸಂವಿಧಾನ ಪೀಠಿಕೆ ಬೋಧಿಸಿದ ಜಿಲ್ಲಾಧಿಕಾರಿಗಳು: ಕಾರ್ಯಕ್ರಮದ ಆರಂಭದಲ್ಲಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಭಾರತ ಸಂವಿಧಾನದ ಪೂರ್ವ ಪೀಠಿಕೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲ ಗಣ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ವಿದ್ಯಾರ್ಥಿ ಯುವಜನರು ಸಂವಿಧಾನ ಪೀಠಿಕೆಯನ್ನು ವಾಚನ ಮಾಡಿದರು. ಇದೆ ವೇಳೆ, ಸಂವಿಧಾನ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಶಾಸಕರಿಂದ ಸಂದೇಶ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರ ಇವರ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮಕ್ಕೆ ಸಸಿಗೆ ನೀರೆರೆಯುವ ಮೂಲಕ, ಶಾಸಕರಾದ ಬಸನಗೌಡ ದದ್ದಲ್ ಅವರು ಚಾಲನೆ ನೀಡಿದರು. ಈ ವೇಳೆ ಶಾಸಕರು ಮಾತನಾಡಿ, ಪ್ರಜಾಪ್ರಭುತ್ವದ ಮಹತ್ವದ ಸಂದೇಶ ಸಾರುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಡೆಸಲಾಗುತ್ತಿದೆ. ಸಂವಿಧಾನದ ಆಶಯದಂತೆ ನಾವೆಲ್ಲರೂ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯ ಅಂಗವಾಗಿ ಸರ್ಕಾರವು ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ವ್ಯಾಪಕವಾಗಿ ಅರಿವು ಮೂಡಿಸುವ ಉದ್ದೇಶದಿಂದ ನನ್ನ ಮತ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿದೆ. ಈ ಸ್ಪರ್ಧೆಗಳ ಯಶಸ್ಸಿಗೆ ಪ್ರತಿಯೊಬ್ಬರು ಸಹಕರಿಸಬೇಕು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯದಂತೆ ಎಲ್ಲರೂ ಒಗ್ಗೂಡಿ, ಸಹಬಾಳ್ವೆಯಿಂದ ಜೀವನ ನಡೆಸಿದಾಗ ಪ್ರಜಾಪ್ರಭುತ್ವಕ್ಕೆ ಅರ್ಥ ಬರಲಿದೆ ಎಂದು ಸಲಹೆ ಮಾಡಿದರು.

ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂಧು ರಘು ಹೆಚ್ ಎಸ್., ಆದಿ ಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಾಜೇಂದ್ರ ಜಲ್ದಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ಮತದಾರ ಸಾಕ್ಷರತಾ ಕ್ಲಬ್‍ನ ನೋಡಲ್ ಅಧಿಕಾರಿಗಳಾದ ಡಾ.ದಂಡಪ್ಪ ಬಿರಾದಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಈರೇಶ್ ನಾಯಕ, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ವ್ಯವಸ್ಥಾಪಕರಾದ ರವಿ ಸೇರಿದಂತೆ ವಸತಿ ನಿಲಯಗಳ ನಿಲಯಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande