ವಿಜಯಪುರ, 15 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಸೈಕಲ್ ಜಾಥಾ ಹಾಗೂ ಮ್ಯಾರಥಾನ್‌ಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ.ವಿಜಯ್ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಜಂಟಿಯಾಗಿ ಚಾಲನೆ ನೀಡಿದರು.
ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಸೈಕಲ್ ಜಾಥಾ ನವನಗರದ ಕಾಳಿದಾಸ ಶಿಕ್ಷಣ ಸಂಸ್ಥೆಯ ಮೈದಾನದಿಂದ ಪ್ರಾರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನಕ್ಕೆ ಮುಕ್ತಾಯಗೊಂಡಿತು.
ಮ್ಯಾರಥಾನ್ ಸಹ ಕಾಳಿದಾಸ ಶಿಕ್ಷಣ ಸಂಸ್ಥೆಯಿ0ದ ಪ್ರಾರಂಭವಾಗಿ ವಿದ್ಯಾಗಿರಿ ಸರ್ಕಲ್ ಮಾರ್ಗವಾಗಿ ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರಕ್ಕೆ ಮುಕ್ತಾಯಗೊಂಡಿತು. ಸೈಕಲ್‌ಗಳಲ್ಲಿ ನನ್ನ ಮತ ನನ್ನ ಹಕ್ಕು ಎಂಬ ಘೋಷವಾಕ್ಯದ ಫಲಕಗಳನ್ನು ಪ್ರದರ್ಶಿಸಲಾಯಿತು. ಬಿಳಿ ಬಣ್ಣದ ಟೀಶರ್ಟ ಧರಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ರಮೇಶ ಚವ್ಹಾಣ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಬಿಟಿಡಿಎ ಮುಖ್ಯ ಅಭಿಯಂತರ ಚಂದ್ರಹಾಸ ಬಂಡಿ, ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರ ಡಿ.ಬಸವರಾಜ, ಕೆಪಿಟಿಸಿಎಲ್ ಮುಖ್ಯ ಅಭಿಯಂತರ ಕಾಶಿನಾಥ ಹಿರೇಮಠ ಸೇರಿದಂತೆ ಇತರೆ ಗಣ್ಯಮಾನ್ಯರು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande