ವಿಜಯಪುರ ಜಿಲ್ಲಾಸ್ಪತ್ರೆ ಎದುರೇ ಗರ್ಭಿಣಿಗೆ ಹೆರಿಗೆ !
ವಿಜಯಪುರ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯದಿಂದ ಗರ್ಭಿಣಿ ಆಸ್ಪತ್ರೆ ಎದುರೇ ಹೆರಿಗೆ ಆಗಿರುವ ಘಟನೆ ವಿಜಯಪುರ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದ ಕಾವೇರಿ ಎಂಬ ಗರ್ಭ
ಹೆರಿಗೆ


ವಿಜಯಪುರ, 15 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯದಿಂದ ಗರ್ಭಿಣಿ ಆಸ್ಪತ್ರೆ ಎದುರೇ ಹೆರಿಗೆ ಆಗಿರುವ ಘಟನೆ ವಿಜಯಪುರ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದ ಕಾವೇರಿ ಎಂಬ ಗರ್ಭಿಣಿಗೆ ಹೆರಿಗೆ ಆಗಿದೆ.

ಬಸವನಬಾಗೇವಾಡಿಯಿಂದ ವಿಜಯಪುರ ಜಿಲ್ಲಾಸ್ಪತ್ರೆ ಆವರಣಕ್ಕೆ ಆಗಮಿಸಿದರೂ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಆವರಣದಲ್ಲಿಯೇ ಹೆರಿಗೆ ಆಗಿದೆ.

ಇದರಿಂದ ಸ್ಥಳೀಯರು ಸರ್ಕಾರ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ, ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳ ಸಿಗುತ್ತವೆ. ಆಸ್ಪತ್ರೆ ಸಿಬ್ಬಂದಿ ಈ ತರಹ ನಿರ್ಲಕ್ಷ್ಯ ವಹಿಸಿದರೆ ಬಡ ರೋಗಿಗಳು, ಗರ್ಭಿಣಿಯ ಆರೋಗ್ಯದ ಕಾಳಜಿಗೆ ಹೊಣೆ ಯಾರು ಎಂದು ಸ್ಥಳೀಯರು ಕಿಡಿಕಾರಿದರು.

ಈ ಬಗ್ಗೆ ಜಿಲ್ಲಾ ಸರ್ಜನ್ ಅವರಿಗೆ ಕೇಳಿದರೆ ಒಂದೊಂದು ಸಲ ಈ ತರಹ ಘಟನೆ ಆಗುತ್ತವೆ. ತಾಯಿ ಹಾಗೂ ಮಗು ಸುರಕ್ಷಿತವಾಗಿ, ಆರೋಗ್ಯವಾಗಿ ಇದ್ದಾರೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದರು.

ಒಟ್ಟಿನಲ್ಲಿ ವಿಜಯಪುರ ಸರ್ಕಾರಿ ಆಸ್ಪತ್ರೆಗೆ ಹಲವು ಬಿರುದುಗಳನ್ನು ಪಡೆದುಕೊಂಡಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ರೋಗಿಗಳ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸ್ಥಳೀಯರು, ರೋಗಿಗಳು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande